ಮಡಿಕೇರಿ (ಸೆ.17): ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಶಾಸಕ ಅಪ್ಪಚ್ಚು ರಂಜನ್ ಆಗ್ರಹಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಸಿಐಡಿಯು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿರುವ ಹಿನ್ನೆಲೆಯಲ್ಲಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ ಶಾಸಕ ಅಪ್ಪಚ್ಚು ರಂಜನ್, ಹೀಗೇ ಆಗುತ್ತದೆ ಎನ್ನುವ ನಿರೀಕ್ಷೆ ಮೊದಲೇ ಇತ್ತು ಎಂದು ಪ್ರತಿಕ್ರಿಯಿಸಿದ್ದಾರೆ.

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಸಿಬಿಐ ತನಿಖೆಗೆ ನಡೆಸಸಬೇಕು, ಆ ನಿಟ್ಟಿನಲ್ಲಿ ವಿಧಾನಸಭೆಯಲ್ಲೂ ಹೋರಾಟ ನಡೆಸುತ್ತೇವೆ ಎಂದು ಅಪಚ್ಚು ರಂಜನ್ ಹೇಳಿದ್ದಾರೆ. 

ಮಡಿಕೇರಿ ನ್ಯಾಯಲಯಕ್ಕೆ ಸಲ್ಲಿಸಿರುವ ಬಿ ರಿಪೋರ್ಟ್​ನಲ್ಲಿ ಮಾಜಿ ಸಚಿವ ಕೆ.ಜೆ. ಜಾರ್ಜ್​ ಸೇರಿ ಮೂವರಿಗೆ ಸಿಐಡಿ ಕ್ಲೀನ್​ಚಿಟ್​ನೀಡಿದೆ. ಪ್ರಕರಣದಲ್ಲಿ ಸಚಿವ ಜಾರ್ಜ್​ ಜತೆ ಎಡಿಜಿಪಿ ಎ.ಎಂ​​. ಪ್ರಸಾದ್ ಹಾಗೂ ಡಿಐಜಿ ಪ್ರಣಬ್​ ಮೊಹಂತಿಯವರ ಮೇಲೂ ಆರೋಪ ಹೊರಿಸಲಾಗಿತ್ತು.

ಸೆಪ್ಟೆಂಬರ್​ 19ರ ಒಳಗಾಗಿ ಗಣಪತಿ ಪ್ರಕರಣದ ವರದಿ ಸಲ್ಲಿಸಲು ಸಿಐಡಿಗೆ ಕೋರ್ಟ್​ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಜಾರ್ಜ್​ ಸೇರಿ ಇತರೆ ಇಬ್ಬರು ಹಿರಿಯ ಅಧಿಕಾರಿಗಳ ವಿರುದ್ಧದ ಆರೋಪಕ್ಕೆ ಯಾವುದೇ ಸಾಕ್ಷಿಯಿಲ್ಲ ಹಾಗೂ ಪ್ರಕರಣ ಸಂಬಂಧ ಸೂಕ್ತ ಸಾಕ್ಷ್ಯಾಧಾರ ಕೊರತೆ ಇದೆ ಎಂಬುವುದಾಗಿ ವರದಿಯಲ್ಲಿ ನಮೂದಿಸಲಾಗಿದೆ ಎಂದು ಸುವರ್ಣ ನ್ಯೂಸ್ ಗೆ ಸಿಐಡಿ ಮೂಲಗಳು ಮಾಹಿತಿ ನೀಡಿವೆ.