ಕಾಂಗ್ರೆಸ್ ಮುಖಂಡ ಮಾಲಿಕಯ್ಯ ಗುತ್ತೇದಾರ್ ಬಿಜೆಪಿಗೆ

First Published 29, Mar 2018, 8:00 AM IST
MLA Malikayya Guttedar announces Resignation
Highlights

ಹೈದರಾಬಾದ್ ಕರ್ನಾಟಕ ವಿಭಾಗದಲ್ಲಿ ಕಾಂಗ್ರೆಸ್‌ಗೆ ಭಾರೀ ಹಿನ್ನಡೆಯಾಗಿದ್ದು ಕಾಂಗ್ರೆಸ್‌ನ ಹಿರಿಯ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರು ಗುರುವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಳ್ಳುತ್ತಿರುವುದಾಗಿ ‘ಬಾಂಬ್’ ಸಿಡಿಸಿದ್ದಾರೆ.

ಬೆಂಗಳೂರು: ಹೈದರಾಬಾದ್ ಕರ್ನಾಟಕ ವಿಭಾಗದಲ್ಲಿ ಕಾಂಗ್ರೆಸ್‌ಗೆ ಭಾರೀ ಹಿನ್ನಡೆಯಾಗಿದ್ದು ಕಾಂಗ್ರೆಸ್‌ನ ಹಿರಿಯ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರು ಗುರುವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಳ್ಳುತ್ತಿರುವುದಾಗಿ ‘ಬಾಂಬ್’ ಸಿಡಿಸಿದ್ದಾರೆ.

ಈ ಬಗ್ಗೆ ಬುಧವಾರ ರಾತ್ರಿ ‘ಕನ್ನಡಪ್ರಭ’ದೊಂದಿಗೆ ಮಾತನಾಡಿದ ಅವರು, ಆರು ಬಾರಿ ಶಾಸಕನಾಗಿರುವ ನನಗೆ ಪದವಿ-ಸಚಿವ ಸ್ಥಾನದ ಆಸೆ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಅಪಾರ ಗೌರವ ಇಟ್ಟುಕೊಂಡಿರುವ ನಾನು ಅವರಿಗೆ ಕೊಟ್ಟಿರುವ ಮಾತಿನಂತೆ ಎಷ್ಟೇ ಅವಮಾನ ಆಗಿದ್ದರೂ ಸಹಿಸಿಕೊಂಡು ಪಕ್ಷದಲ್ಲಿದ್ದೇನೆ. ಇದೀಗ ಸರ್ಕಾರದ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಪಕ್ಷ ತೊರೆಯುತ್ತಿದ್ದೇನೆ ಎಂದು ಹೇಳಿದರು.

ಈ ಭಾಗದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಡಾ.ಶರಣಪ್ರಕಾಶ್ ಪಾಟೀಲ್, ಪ್ರಿಯಾಂಕ ಖರ್ಗೆ ಮೂರು ಜನ ಒಂದಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡಿ ಮೂಲೆಗುಂಪು ಮಾಡಿದ್ದಾರೆ. ಅವರಿಗೆ ಉತ್ತರ ನೀಡಲು ರಾಷ್ಟ್ರೀಯ ಪಕ್ಷ ಬಿಜೆಪಿಗೆ ಸೇರಿ ಅವರನ್ನು ಸಮರ್ಥವಾಗಿ ಎದುರಿಸುತ್ತೇನೆ. ಈಗಾಗಲೇ ಒಂದು ಹಂತದ ಮಾತುಕತೆ ಮುಗಿಸಿದ್ದು, ಬಿಜೆಪಿ ಸೇರಿ ನನ್ನ ಸಂಘಟನಾ ಸಾಮರ್ಥ್ಯ ತೋರಿಸಿಕೊಡುತ್ತೇನೆ ಎಂದು ಹೇಳಿದ್ದಾರೆ.

loader