, ಪ್ರಕರಣದಲ್ಲಿ ತಮ್ಮದೇನೂ ಪಾತ್ರವಿಲ್ಲ ವಿನಾಕಾರಣ ಪ್ರಕರಣದಲ್ಲಿ ತಮ್ಮ ಹೆಸರು ತಳುಕು ಹಾಕಿಕೊಂಡಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ರೌಡಿ ಶೀಟರ್ ಕಡಬಗೆರೆ ಶ್ರೀನಿವಾಸ್ ಶೂಟೌಟ್ ಪ್ರಕರಣಕ್ಕೂ ತಮಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಯಲಹಂಕ ಶಾಸಕ ಎಸ್ ಎರ್ ವಿಶ್ವನಾಥ್ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರೌಡಿ ಶೀಟರ್ ಕಡಬಗೆರೆ ಶ್ರೀನಿವಾಸ್ ಹತ್ಯೆ ಪ್ರಕರಣದಲ್ಲಿ ಅಗ್ನಿ ಶ್ರೀಧರ್, ಬಚ್ಚನ್, ಸೈಲೆಂಟ್ ಸುನೀಲ ಹಾಗೂ ರೋಹಿತ್ ಎಂಬುವವರ ಜೊತೆ ಶಾಸಕ ಎಸ್ ಆರ್ ವಿಶ್ವನಾಥ್ ಅವರ ಹೆಸರೂ ಕೂಡ ತಳುಕು ಹಾಕಿಕೊಂಡಿತ್ತು. ಈ ಹಿನ್ನಲೆಯಲ್ಲಿ ಇಂದು ಗೃಹ ಸಚಿವ ಪರಮೇಶ್ವರ ಅವರನ್ನು ಭೇಟಿ ಮಾಡಿದ ಶಾಸಕ ವಿಶ್ವನಾಥ್ ಅವರು, ಪ್ರಕರಣದಲ್ಲಿ ತಮ್ಮದೇನೂ ಪಾತ್ರವಿಲ್ಲ ವಿನಾಕಾರಣ ಪ್ರಕರಣದಲ್ಲಿ ತಮ್ಮ ಹೆಸರು ತಳುಕು ಹಾಕಿಕೊಂಡಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಗೃಹಸಚಿವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ವಿಶ್ವನಾಥ್, ಪ್ರಕರಣದಲ್ಲಿ ತಮ್ಮ ಎಳ್ಳಷ್ಟೂ ಪಾತ್ರವಿಲ್ಲ. ಯಾವುದೇ ತನಿಖೆಗೂ ತಾವು ಸಿದ್ಧ. ಬೇಕಿದ್ದರೆ ತಮ್ಮನ್ನು ಮಂಪರು ಪರೀಕ್ಷೆಗೊಳಪಡಿಸಲು ಎಂದು ಹೇಳಿದ್ದಾರೆ.