ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು ನಾಳೆ ಬೆಳಿಗ್ಗೆ 11 ಗಂಟೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ಕ್ಷೇತ್ರದ ಜನತೆ,ಕಾರ್ಯಕರ್ತರು, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
ಬೆಂಗಳೂರು(ಜು.06): ಇತ್ತ ಮೈಸೂರಿನಲ್ಲಿ ದೇವೇಗೌಡರ ಮೊಮ್ಮಗ ಮಾತೃ ಪಕ್ಷ ಜೆಡಿಎಸ್ ವಿರುದ್ಧ ಭಿನ್ನಮತ ಸ್ಫೋಟಿಸಿದರೆ ಇತ್ತ 'ಕೈ' ಪಕ್ಷದಲ್ಲೂ ಆಂತರಿಕ ಕಲಹ ಶುರುವಾಗಿದೆ. ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಡಾ.ಸುಧಾಕರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಚಿಕ್ಕಬಳ್ಳಾಪುರ ಸಂಸದ ಹಾಗೂ ಸುಧಾಕರ್ ನಡುವೆ ಆಂತರಿಕ ಭಿನ್ನಮತದಿಂದಾಗಿ ರಾಜೀನಾಮೆ ಘೋಷಿಸುತ್ತಿದ್ದಾರೆ ಎನ್ನಲಾಗಿದೆ.
ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು ನಾಳೆ ಬೆಳಿಗ್ಗೆ 11 ಗಂಟೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ಕ್ಷೇತ್ರದ ಜನತೆ,ಕಾರ್ಯಕರ್ತರು, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
ಈ ನಡುವೆ ಸುಧಾಕರ್ ಅವರ ತಂದೆ ಹಾಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಆಗಿರುವ ಕೇಶವ ರೆಡ್ಡಿ ಅವರು ಸಹ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.