ಮತ್ತೊಂದು ಪಕ್ಷಾಂತರಕ್ಕೆ ಶಾಸಕ ಯೋಗೇಶ್ವರ್ ಅಣಿ!
ಚನ್ನಪಟ್ಟಣದ ಶಾಸಕ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ಗೆ ಗುಡ್ ಬೈ ಹೇಳುವ ಸಾಧ್ಯತೆ ಹೆಚ್ಚಿದೆ ಅಂತ ಹೇಳಲಾಗ್ತಿದೆ. ಎಸ್ಪಿಯಿಂದ ಗೆದ್ದು ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿರುವ ಸಿ.ಪಿ.ಯೋಗೇಶ್ವರ್ ಈಗ ಬಿಜೆಪಿಗೆ ಸೇರ್ಪಡೆಯಾಗ್ತಾರೆ ಅನ್ನೋ ಮಾತುಗಳು ಕೇಳಿಬರ್ತಿವೆ.
ಯೋಗೇಶ್ವರ್ ಜೊತೆ ಸಹೋದರ ರಾಮನಗರ ಜಿ.ಪಂ ಅಧ್ಯಕ್ಷ ಸಿ.ಪಿ. ರಾಜೇಶ್ ಸೇರಿದಂತೆ ಚನ್ನಪಟ್ಟಣ ಕಾಂಗ್ರೆಸ್ ಮುಖಂಡರು ಕೂಡ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆಗಳಿವೆ ಎನ್ನಲಾಗ್ತಿದೆ. 2 ಜಿ.ಪಂ ಸದಸ್ಯರು, 13 ತಾ.ಪಂ ಸದಸ್ಯರು ಬಿಜೆಪಿ ಸೇರಲು ನಿರ್ಧಾರಿಸಿದ್ದಾರೆ. ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ ಸಾಧ್ಯತೆ ಇದೆ ಅಂತ ಮೂಲಗಳು ತಿಳಿಸಿವೆ. ಎಸ್ಪಿಯಿಂದ ಗೆದ್ದು ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದ ಸಿ.ಪಿ.ಯೋಗೇಶ್ವರ್, ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದರು.
