ಬೆಂಗಳೂರಿನ ವಿಧಾನಸೌಧ ಹಾಗೂ ವಿಕಾಸಸೌಧದ ನಡುವೆ ಇರುವ ಗಾಂಧಿ ಪ್ರತಿಮೆಯ ಸಮ್ಮುಖದಲ್ಲಿ 13 ಮಂದಿ ವಿಧಾನ ಪರಿಷತ್ ಸದಸ್ಯರು ಧರಣಿ ನಡೆಸುತ್ತಿದ್ದಾರೆ.
ಶಿಕ್ಷಕರ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದ ಶಾಸಕರು ನಡೆಸುತ್ತಿರುವ ಪ್ರತಿಭಟನೆ 3ನೇ ದಿನಕ್ಕೆ ಕಾಲಿಟ್ಟಿದೆ. ಬೆಂಗಳೂರಿನ ವಿಧಾನಸೌಧ ಹಾಗೂ ವಿಕಾಸಸೌಧದ ನಡುವೆ ಇರುವ ಗಾಂಧಿ ಪ್ರತಿಮೆಯ ಸಮ್ಮುಖದಲ್ಲಿ 13 ಮಂದಿ ವಿಧಾನ ಪರಿಷತ್ ಸದಸ್ಯರು ಧರಣಿ ನಡೆಸುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯ ತಮ್ಮ ಬೇಡಿಕೆಗಳ ಈಡೇರಿಕೆಗೆ ಕ್ರಮವಹಿಸುವವರೆಗೂ ಧರಣಿ ಕೈಬಿಡಲ್ಲ ಅಂತ ಪಟ್ಟು ಹಿಡಿದಿದ್ದಾರೆ. ಹೀಗಾಗಿ ಇಂದು ಜೆಡಿಎಸ್ ಶಾಸಕ ಕೋನರೆಡ್ಡಿ, ಬಿಜೆಪಿ ಮುಖಂಡ ಬಸವರಾಜ ಬೊಮ್ಮಾಯಿ, ಜೆಡಿಎಸ್ ಮುಖಂಡ ಹೆಚ್.ಡಿ. ರೇವಣ್ಣ ಸೇರಿದಂತೆ ಹಲವರು ಭೇಟಿ ಮಾಡಿ ಮಾತುಕತೆ ನಡೆಸಿದರು.
