ನವದೆಹಲಿ (ಡಿ. 22): ಪ್ರಧಾನಿ ಮೋದಿಯವರ ಟೀಕೆಗೆ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, ಜನರ ಪ್ರಶ್ನೆಗಳಿಗೆ ಉತ್ತರ ಕೊಡುವವರೆಗೆ ನಿಮ್ಮ ಅಣಕಗಳಿಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು  ಹೇಳಿದ್ದಾರೆ.

ಪ್ರಧಾನಿ ಮೋದಿಯವರ ಭ್ರಷ್ಟಾಚಾರದ ಬಗ್ಗೆ ನಿನ್ನೆ ಗುಜರಾತ್ ನಲ್ಲಿ ಎರಡ್ಮೂರು ಪ್ರಶ್ನೆಗಳನ್ನು ಕೇಳಿದ್ದೆ. ಮೋದಿಯವರು ಗುಜರಾತ್ ಸಿಎಂ ಆಗಿದ್ದಾಗ ಉದ್ಯಮಿಗಳಿಂದ  ಭಾರೀ ಪ್ರಮಾಣದಲ್ಲಿ ಹಣ ಪಡೆದಿದ್ದರು ಎಂದು ಹೇಳಿದ್ದೆ. ಈ ಪ್ರಶ್ನೆಗೆ ಮೋದಿ ಉತ್ತರಿಸಿಲ್ಲ. ನೀವು ನನ್ನನ್ನು ಗೇಲಿ ಮಾಡಿ ಆದರೆ ಜನರ ಪ್ರಶ್ನೆಗಳಿಗೆ ಮೊದಲು ಉತ್ತರ ಕೊಡಿ ಎಂದು ಖಾರವಾಗಿ ನುಡಿದಿದ್ದಾರೆ.