Asianet Suvarna News Asianet Suvarna News

ಆಧುನಿಕ ಜೀವನಶೈಲಿಯಿಂದ ಹೃದ್ರೋಗ ಸಮಸ್ಯೆ ಹೆಚ್ಚಳ: ಸೌಮ್ಯಾ ರೆಡ್ಡಿ

ಹೃದಯ ಸಂಬಂಧಿ ಖಾಯಿಲೆಗೆ ಆಧುನಿಕ ಜೀವನಶೈಲಿ ಕಾರಣ! ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಅಭಿಮತ! ತಥಾಗತ್ ಹೃದಯ ಆಸ್ಪತ್ರೆ ಆಯೋಜಿಸಿದ್ದ ನನ್ನ ಹೃದಯ ನಿಮ್ಮ ಹೃದಯ ವಾಕಥಾನ್! ಯುವ ಪೀಳಿಗೆ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು! ಆರೋಗ್ಯ ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಉಪಸ್ಥಿತ

Modern life style cause rasing heart problem says Soumya Reddy on World Heart Day
Author
Bengaluru, First Published Sep 29, 2018, 1:28 PM IST
  • Facebook
  • Twitter
  • Whatsapp

ಬೆಂಗಳೂರು(ಸೆ.29): ಆಧುನಿಕ ಜೀವನ ಶೈಲಿಯಿಂದ ಹೃದಯ ಸಂಬಂಧಿ ಹಾಗೂ ಡಯಾಬಿಟಿಸ್ ಖಾಯಿಲೆಗಳು ಹೆಚ್ಚಾಗುತ್ತಿವೆ ಎಂದು ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಹೇಳಿದ್ದಾರೆ. ನಗರದ ಪ್ರೀಡಂ ಪಾರ್ಕ್ ನಲ್ಲಿ ತಥಾಗತ್ ಹೃದಯ ಆಸ್ಪತ್ರೆ ಆಯೋಜಿಸಿದ್ದ ನನ್ನ ಹೃದಯ ನಿಮ್ಮ ಹೃದಯ ವಾಕಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯುವ ಪೀಳಿಗೆ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಸಲಹೆ ನೀಡಿದ್ದಾರೆ. 

ನಾವು ತಿನ್ನುವ ಆಹಾರದಲ್ಲಿಯೂ ಸಾಕಷ್ಟು ವ್ಯತ್ಯಾಸವಾಗಿರುವುದರಿಂದ ಹೃದಯ ಸಂಬಂಧಿ ಖಾಯಿಲೆ ಬರುತ್ತಿದೆ. ಪೌಷ್ಠಿಕ ಹಾಗೂ ಸತ್ವಯುತ ಆಹಾರ ಸೇವನೆಯಿಂದ ರೋಗಗಳನ್ನು ತಡೆಯಬಹುದು.  ಈ ನಿಟ್ಟಿನಲ್ಲಿ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಸ್ವಾಗತಾರ್ಹ ಎಂದು ಹೇಳಿದರು.

Modern life style cause rasing heart problem says Soumya Reddy on World Heart Day

ಆರೋಗ್ಯ ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಹೃದ್ರೋಗ ಸಮಸ್ಯೆ ಹೆಚ್ಚಾಗುತ್ತಿದೆ. ಜನರು ವ್ಯಾಯಾಮ ಹಾಗೂ ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳುವ ಮೂಲಕ ಹೃದಯಾಘಾತ ಆಗುವುದನ್ನು ತಡೆಯಬಹುದು. ರಾಜ್ಯ ಸರ್ಕಾರ ಸಾಂಕ್ರಾಮಿಕವಲ್ಲದ ಹೃದಯ ಸಂಬಂಧಿ ಹಾಗೂ ಡಯಾಬಿಟಿಸ್ ನಂತಹ ರೋಗಗಳ ಪತ್ತೆ ಮಾಡುವ ಕುರಿತು ಬಜೆಟ್ ನಲ್ಲಿ ಯೋಜನೆ ಘೊಷಣೆ ಮಾಡಿದೆ.

Modern life style cause rasing heart problem says Soumya Reddy on World Heart Day

ಶೀಘ್ರವೇ ಸಂಪುಟದ ಮುಂದೆ ತಂದು ಯೋಜನೆ ಜಾರಿಗೆ ತರಲಾಗುವುದು ಎಂದು ಹೇಳಿದರು. ತಥಾಗತ್ ಹೃದಯ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಡಾ. ಮಹಾಂತೇಶ್ ಚರಂತಿಮಠ್ ಮಾತನಾಡಿ, ಯುವಕರಲ್ಲಿ ಹೃದಯ ಸಬಂಂಧಿ ಖಾಯಿಲೆಗಳು ಹೆಚ್ಚಾಗುತ್ತಿದೆ. ನೂರು ಜನರಲ್ಲಿ ಶೇಕಡಾ 40 ರಷ್ಟು ಜನರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲಯತ್ತಿದ್ದಾರೆ.  ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ತಥಾಗತ್ ಸಂಸ್ಥೆವತಿಯಿಂದ  ಪ್ರತಿ ವರ್ಷ ವಾಕಥಾನ್ ಮೂಲಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.

Modern life style cause rasing heart problem says Soumya Reddy on World Heart Day

ಇಂದಿನ ವಾಕಥಾನ್ ನಲ್ಲಿ ನಗರದ ಅನೇಕ ಕಾಲೇಜುಗಳಿಂದ ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ ಎಂದು ಹೇಳಿದರು. ವಾಕಥಾನ್ ನಲ್ಲಿ ವಿಧಾನ ಪರಿಷತ್ ಸದಸ್ಯ ಪಿ.ಆರ್. ರಮೇಶ್,  ಡಿಸ್ಟ್ರಿಕ್ ಗೌರ್ನರ್ 317 ಇ ಲೈಯನ್ ಎಚ್.ಟಿ. ಸೀತಾರಾಮ್, ಲೈಯನ್ ಚಾಮುಂಡೇಶ್ವರಿ ಪಾಲ್ಗೊಂಡಿದ್ದರು. ನಂತರ ಫ್ರೀಡಂ ಪಾರ್ಕ್ ನಿಂದ ಮಲ್ಲೇಶ್ವರ್ ಮಂತ್ರಿಮಾಲ್ ವರೆಗೂ ವಿದ್ಯಾರ್ಥಿಗಳು ವಾಕಥಾನ್ ನಲ್ಲಿ ಪಾಲ್ಗೊಂಡಿದ್ದರು.

Follow Us:
Download App:
  • android
  • ios