ಬೆಂಗಳೂರು (ಸೆ.21): ಕಾವೇರಿ ವಿಚಾರವಾಗಿ ಸುಪ್ರೀಂಕೋರ್ಟ್ ತೀರ್ಪು ರಾಷ್ಟ್ರೀಯ ಸಂಚು ಎಂದು ಸಂಸದ ಹಾಗೂ ಕಾಂಗ್ರೆಸ್ ನಾಯಕ ಎಂ. ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಈ ತೀರ್ಪಿನ ಹಿಂದೆ ಪ್ರಧಾನಿ ನರೇಂದ್ರ ಮೋದಿ ಷಡ್ಯಂತ್ರ ಇದರ ಹಿಂದಿದೆ ಎಂದು ಸುವರ್ಣ ನ್ಯೂಸ್ಗೆ ಸಂಸದ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕು ಎಂದು ಕೇಂದ್ರದ ಕಾನೂನಿನ ಪ್ರತಿನಿಧಿಗಳಾದ ಅಡಿಶಿನಲ್ ಸಾಲಿಸಿಟರ್ ಜನರಲ್ ನಿನ್ನೆ ಸುಪ್ರೀಂ ಕೋರ್ಟ್'ಗೆ ಮನವಿ ಮಾಡಿದ್ದಾರೆ. ಕರ್ನಾಟಕ ರಾಜ್ಯ ಹಾಗೂ ರೈತರ ಹಿತಾಸಕ್ತಿಯ ವಿರುದ್ಧ ರಾಷ್ಟ್ರೀಯ ಸಂಚೊಂದು ದೆಹಲಿಯಿಂದ ಬೆಂಗಳೂರಿನವರೆಗೆ ವ್ಯಾಪಿಸಿದೆ ಎಂದು ಮೊಯ್ಲಿ ಹೇಳಿದ್ದಾರೆ.
ಇಡಿಯ ವಿದ್ಯಮಾನಗಳನ್ನು ನೋಡಿದರೆ ಇದು ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಉದ್ದೇಶಪೂರ್ವಕ ಪಿತೂರಿ ಎಂದು ಗೊತ್ತಾಗುತ್ತದೆ ಎಂದು ಮೊಯ್ಲಿ ಹೇಳಿದ್ದಾರೆ.
.
