ನವದೆಹಲಿ (ಡಿ.01): 500, 1000 ನೋಟ್ ನಿಷೇಧದ ಹಿನ್ನೆಲೆಯಲ್ಲಿ  ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಮೋದಿ ಟಿಆರ್​ಪಿ ರಾಜಕೀಯ ಮಾಡುತ್ತಿದ್ದಾರೆ. ಪ್ರಧಾನಿಯವರ ಅದಕ್ಷತೆ ಪರಿಣಾಮವಾಗಿ ದೇಶಕ್ಕೆ ಹಾನಿಯಾಗುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಮುಂದುವರೆದು, ತಮ್ಮ ಘನತೆಗೆ ಧಕ್ಕೆ ಬರದಂತೆ ಪ್ರಧಾನಿ ಟಿಆರ್​’ಪಿ ಕಾರ್ಯಕ್ರಮಗಳನ್ನು ಮಾಡಲು ಮುಂದಾಗಿದ್ದಾರೆ ಎಂದು ರಾಹುಲ್ ಆಪಾದಿಸಿದ್ದಾರೆ.

ಯುಪಿಎ ಅಧಿಕಾರ ಅವಧಿಯಲ್ಲಿ ಈ ತರಹದ ಆಡಳಿತ ಯಾರೂ ಮಾಡಿರಲಿಲ್ಲ ಎಂದು ರಾಹುಲ್​ ಗಾಂಧಿ  ಪಕ್ಷವನ್ನು ಸಮರ್ಥಿಸಿಕೊಂಡಿದ್ದಾರೆ.