ನವದೆಹಲಿ : ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ರೈತರ ಪ್ರಗತಿಗಾಗಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹೊಸ ಪ್ಯಾಕೇಜ್ ಘೋಷಣೆ ಮಾಡಲು ಸಿದ್ಧವಾಗಿದೆ. 

ರೈತರ ಆದಾಯ ವೃದ್ಧಿ, ಹಾಗೂ ಕೃಷಿ ಕ್ಷೇತ್ರದ ಪ್ರಗತಿಗಾಗಿ ಮೋದಿ ಸರ್ಕಾರ ಹೊಸ ಪ್ಯಾಕೇಜ್ ನೀಡುವ ಸಾಧ್ಯತೆ ಇದೆ. ಸೋಮವಾರ ಶಾಸಕಾಂಗ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಸಣ್ಣ ಹಾಗೂ ಮಧ್ಯಮ ವರ್ಗದ ರೈತರ ಆದಾಯ ಕೊರತೆಯ ಬಗ್ಗೆ ಈ ವೇಳೆ ಚರ್ಚೆ ನಡೆಯಲಿದೆ. 

ಅಲ್ಲದೇ ಕೃಷಿ ಸಚಿವಾಲಯವು ದೀರ್ಘ ಹಾಗೂ ಕಡಿಮೆ ಅವಧಿಯ ಕೃಷಿ ಸಮಸ್ಯೆಗಳ ಪರಿಹಾರದ ಬಗ್ಗೆ ಮಾಹಿತಿ ನೀಡಿದ್ದು, ಈ ಬಗ್ಗೆ ಶಾಸಕಾಂಗ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. 

ಅಲ್ಲದೇ ಕೃಷಿ ಸಾಲವನ್ನು ಸೂಕ್ತ ಸಂದರ್ಭದಲ್ಲಿಯೇ ಮರುಪಾವತಿ ಮಾಡುತ್ತಿರುವ ರೈತರ ಬಡ್ಡಿಯನ್ನು ಮನ್ನಾ ಮಾಡುವ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ. 

ಈಗಾಗಲೇ ಕೇಂದ್ರ ಕೃಷಿ ಸಚಿವರಾದ ರಾಧಾಮೋಹನ್ ಸಿಂಗ್ ಅವರು  2019 - 20ನೇ ಸಾಲಿನ ಬಜೆಟ್ ನಲ್ಲಿ ಸರ್ಕಾರ ಕೃಷಿ ಪ್ಯಾಕೇಜ್ ಘೋಷಣೆ ಮಾಡಲಿದೆ ಎಂದು ಹೇಳಿದ್ದರು.