ಮೋದಿ ನೇತೃತ್ವದ ಸರ್ಕಾರದ ನೀತಿಗಳು ಅಲ್ಪಸಂಖ್ಯಾತ ಸಮುದಾಯಗಳನ್ನು ಮನವೊಲಿಕೆ ಮಾಡದೇ ನಂಬಿಕಸ್ಥ ವಾತಾವರಣವನ್ನು ಕಳೆದ 3 ವರ್ಷಗಳಲ್ಲಿ ಸೃಷ್ಟಿಸಿದೆ ಎಂದು ಕೇಂದ್ರ ಸಚಿವ ಮುಕ್ತರ್ ಅಬ್ಬಾಸ್ ನಕ್ವಿ ಹೇಳಿದ್ದಾರೆ.  

ನವದೆಹಲಿ (ಮೇ.11): ಮೋದಿ ನೇತೃತ್ವದ ಸರ್ಕಾರದ ನೀತಿಗಳು ಅಲ್ಪಸಂಖ್ಯಾತ ಸಮುದಾಯಗಳನ್ನು ಮನವೊಲಿಕೆ ಮಾಡದೇ ನಂಬಿಕಸ್ಥ ವಾತಾವರಣವನ್ನು ಕಳೆದ 3 ವರ್ಷಗಳಲ್ಲಿ ಸೃಷ್ಟಿಸಿದೆ ಎಂದು ಕೇಂದ್ರ ಸಚಿವ ಮುಕ್ತರ್ ಅಬ್ಬಾಸ್ ನಕ್ವಿ ಹೇಳಿದ್ದಾರೆ.

ಬಿಜೆಪಿ ಆಡಳಿತದಲ್ಲಿ ಅಲ್ಪಸಂಖ್ಯಾತರಿಗೆ ಭಯದ ವಾತಾವರಣ ನಿರ್ಮಾಣವಾಗಿದೆ ಎನ್ನುವ ಆರೋಪ ಆಗಾಗ ಕೇಳಿ ಬರುತ್ತದೆ. ಇದನ್ನು ತಳ್ಳಿ ಹಾಕಿದ ನಕ್ವಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಅಲ್ಪಸಂಖ್ಯಾತರಿಗೆ ಶಿಕ್ಷಣ, ಕೌಶಲ್ಯಾಧಾರಿತ ತರಬೇತಿ ನೀಡಿ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ಮುಸ್ಲೀಂಮರು,ಬೌದ್ಧರು, ಕ್ರೈಸ್ತರು, ಸಿಖ್ಖರು, ಪಾರ್ಸಿಗಳು, ಹಾಗೂ ಜೈನರನ್ನು ದೇಶದಲ್ಲಿ ಅಲ್ಪಸಂಖ್ಯಾತರು ಎಂದು ಪರಿಗಣಿಸಲಾಗುತ್ತದೆ. ಮನಮೋಹನ್ ಅಧಿಕಾರಾವಧಿಗೆ ಹೋಲಿಸಿದರೆ ಮೋದಿಯವರ ಸರ್ಕಾರ ಇವರಿಗೆ ಹೆಚ್ಚು ಶೈಕ್ಷಣಿಕ ಸೌಲಭ್ಯ ನೀಡಿದೆ ಎಂದು ನಕ್ವಿ ಹೇಳಿದ್ದಾರೆ.

ಅಲ್ಪಸಂಖ್ಯಾತರನ್ನು ಓಲೈಕೆ ಮಾಡದೇ ಅವರ ಶ್ರೇಯೋಭಿವೃದ್ಧಿಗಾಗಿ ಮೋದಿ ಸರ್ಕಾರ ಸಾಕಷ್ಟು ಕ್ರಮ ಕೈಗೊಂಡಿದೆ. ಇದು ಅಲ್ಪಸಂಖ್ಯಾತರಲ್ಲಿ ಅಭಿವೃದ್ದಿ ಹಾಗೂ ನಂಬಿಕೆ ಮೂಡಿಸಿದೆ ಎಂದಿದ್ದಾರೆ.