ಮೋದಿ ಸರ್ಕಾರವು ರೈತ ವಿರೋಧಿಯಾಗಿದೆ. ಶ್ರೀಮಂತ ಉದ್ಯಮಿಗಳ ಸಾಲವನ್ನು ಮನ್ನಾ ಮಾಡಬಹುದಾದರೆ, ಬರಪೀಡಿತ ರೈತರಿಗಾಗಿ ಯಾಕೆ ಅನುದಾನ ನೀಡಬಾರದು? ಎಂದು ರಾಹುಲ್ ಪ್ರಶ್ನಿಸಿದ್ದಾರೆ.

ನವದೆಹಲಿ (ಮಾ.31): ಬರ ಪರಿಹಾರಕ್ಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯ ಜಂತರ್ ಮಂತರ್'ನಲ್ಲಿ ಪ್ರತಿಭಟನೆ ನಡೆಸುತ್ತಿರುವ ತಮಿಳುನಾಡು ರೈತರನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ಗಾಂಧಿ ಇಂದು ಭೇಟಿಯಾಗಿದ್ದಾರೆ.

ಮೋದಿ ನೇತೃತ್ವದ ಸರ್ಕಾರವು ಕೇವಲ ಶ್ರೀಮಂತ ಉದ್ಯಮಿಗಳ ಏಳಿಗೆಗಾಗಿ ಕೆಲಸ ಮಾಡುತ್ತಿದ್ದು, ಬಡ ರೈತರನ್ನು ಕಡೆಗಣಿಸುತ್ತಿದೆ ಎಂದು ರಾಹುಲ್ ಗಾಂಧಿ ಈ ಸಂದರ್ಭದಲ್ಲಿ ಹೇಳಿದ್ದಾರೆ.

ಮೋದಿ ಸರ್ಕಾರವು ರೈತ ವಿರೋಧಿಯಾಗಿದೆ. ಶ್ರೀಮಂತ ಉದ್ಯಮಿಗಳ ಸಾಲವನ್ನು ಮನ್ನಾ ಮಾಡಬಹುದಾದರೆ, ಬರಪೀಡಿತ ರೈತರಿಗಾಗಿ ಯಾಕೆ ಅನುದಾನ ನೀಡಬಾರದು? ಎಂದು ರಾಹುಲ್ ಪ್ರಶ್ನಿಸಿದ್ದಾರೆ.

ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ತಮಿಳುನಾಡಿನ ರೈತರು ಕಳೆದ 19 ದಿನಗಳಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ತಲೆಬುರುಡೆಗಳನ್ನು ಮುಂದಿಟ್ಟುಕೊಂಡು, ಇಲಿಗಳನ್ನು ತಿಂದುಕೊಂಡು ಜಂತರ್ ಮಂತರ್'ನಲ್ಲಿ ಧರಣಿ ನಡೆಸುತ್ತಿದ್ದಾರೆ.