ನಗರದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿ ಮಾತನಾಡಿದ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದ್, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣದ ಮುಖ್ಯಮಂತ್ರಿಗಳು ಬರುತ್ತಾರೆಂದರೆ ಗಂಟೆಗಟ್ಟಲೆ ಕಾದಿರುತ್ತಾರೆ, ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಡಿ.24): ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡುವ ಅವಕಾಶ ನೀಡದಿರುವುನ್ನು ಖಂಡಿಸಿರುವ ಕನ್ನಡ ಪರ ಸಂಘಟನೆಗಳು, ಇದು ಕನ್ನಡಿಗರಿಗೆ ಮಾಡುತ್ತಿರುವ ಅವಮಾನ ಎಂದು ಅಕ್ರೋಶ ವ್ಯಕ್ಟಪಡಿಸಿದ್ದಾರೆ.

ಕಳಸಾ ಬಂಡೂರಿ, ಮಹಾದಾಯಿ, ಬರ ಪರಿಸ್ಥಿತಿ ಬಗ್ಗೆ ಮಾತನಾಡಬೇಕು, ಆದರೆ ಪ್ರಧಾನಿ ಮೋದಿ ಅದಕ್ಕೆ ಅವಕಾಶ ನೀಡುತ್ತಿಲ್ಲ, ಮೊದಲನೆ ಬಾರಿ ಈ ರೀತಿಯಾಗುತ್ತಿದೆ, ಇದರಿಂದ ಕನ್ನಡಿಗರಿಗೆ ಅಪಮಾನವಾಗುತ್ತಿದೆ ಎಂದು ಕನ್ನಡ ಒಕ್ಕೂಟದ ಮುಖಂಡರು ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿ ಮಾತನಾಡಿದ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದ್, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣದ ಮುಖ್ಯಮಂತ್ರಿಗಳು ಬರುತ್ತಾರೆಂದರೆ ಗಂಟೆಗಟ್ಟಲೆ ಕಾದಿರುತ್ತಾರೆ, ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಳಸ ಬಂಡೂರಿ ವಿಚಾರದಲ್ಲಿ ಮೋದಿ ಮಧ್ಯವಹಿಸಬೇಕು ಹಾಗೂ ಕೋಲಾರ-ಚಿಕ್ಕಬಳ್ಳಾಪುರದಲ್ಲಿ ಶಾಶ್ವತ ಕುಡಿಯುವ ನೀರಿನ ಬಗ್ಗೆ ಸರ್ಕಾರ ತೀರ್ಮಾನ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಜನವರಿಯಲ್ಲಿ ಪ್ರಧಾನಿ ಭೇಟಿಗೆ ಸಮಯ ನೀಡಿಲ್ಲವೆಂದಾದಲ್ಲಿ ಕರ್ನಾಟಕ ಬಂದ್ ಮಾಡುವ ಬಗ್ಗೆ ಅವರು ಎಚ್ಚರಿಸಿದ್ದಾರೆ.