ಪ್ರಧಾನಿ ನರೇಂದ್ರ ಮೋದಿ ಅಮೆರಿಕಾ ಪ್ರವಾಸ ಕೈಗೊಂಡಿದ್ದಾರೆ. ಇಂದು ವಾಷಿಂಗ್ಟನ್'ಗೆ ತಲುಪಿದ ಮೋದಿಯನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಗಿದೆ.

ವಾಷಿಂಗ್ಟನ್(ಜೂ.25): ಪ್ರಧಾನಿ ನರೇಂದ್ರ ಮೋದಿ ಅಮೆರಿಕಾ ಪ್ರವಾಸ ಕೈಗೊಂಡಿದ್ದಾರೆ. ಇಂದು ವಾಷಿಂಗ್ಟನ್'ಗೆ ತಲುಪಿದ ಮೋದಿಯನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಗಿದೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಹ್ವಾನದ ಮೇರೆಗೆ ಮೋದಿ ಅಮೆರಿಕಕ್ಕೆ ಭೇಟಿ ನೀಡಿದ್ದಾರೆ. ನಾಳೆ ಪ್ರಧಾನಿ ಮೋದಿ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವ್ರನ್ನು ಭೇಟಿ ಮಾಡಲಿದ್ದಾರೆ. ಉಭಯ ನಾಯಕರ ಮಧ್ಯೆ ಚೊಚ್ಚಲ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ. ಈ ಭೇಟಿಯಿಂದ ಭಾರತ-ಅಮೆರಿಕ ನಡುವಣ ಬಾಂಧವ್ಯ ಹಾಗೂ ದ್ವಿಪಕ್ಷೀಯ ಒಪ್ಪಂದಗಳಿಗೆ ಇನ್ನಷ್ಟು ಬಲ ಬರಲಿದೆ ಎನ್ನಲಾಗಿದೆ.

ಡೊನಾಲ್ಡ್ ಟ್ರಂಪ್, ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಮೋದಿ ಅಮೆರಿಕಕ್ಕೆ ಭೇಟಿ ನೀಡುತ್ತಿದ್ದಾರೆ. ಇದುವರೆಗೆ ಉಭಯ ನಾಯಕರು ಕನಿಷ್ಟ ಮೂರು ಬಾರಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

ಬರಾಕ್ ಒಬಾಮ ಅಧ್ಯಕ್ಷರಾಗಿದ್ದಾಗ ಮೋದಿ ಮೂರು ಬಾರಿ ಅಮೆರಿಕಕ್ಕೆ ತೆರಳಿದ್ದರು. ಮೋದಿ ಹಾಗೂ ಒಬಾಮಾ 8 ಬಾರಿ ಭೇಟಿಯಾಗಿದ್ದರು.