ತುಮಕೂರು ರಸ್ತೆಯಲ್ಲಿರುವ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಿನ್ನೆಯಿಂದ ಆರಂಭವಾಗಿರುವ ಪ್ರವಾಸಿ ಭಾರತೀಯ ದಿವಸ್'ನ ಅಧಿಕೃತ ಕಾರ್ಯಕ್ರಮ ಉದ್ಘಾಟಿಸಿ ಭಾಷಣ ಮಾಡಲಿರುವ ಪ್ರಧಾನಮಂತ್ರಿಯವರತ್ತ ಎಲ್ಲರ ಚಿತ್ತ ನೆಟ್ಟಿದೆ. ವಿಶೇಷ ಕಾರ್ಯಕ್ರಮಕ್ಕೆ ದೊಡ್ಡ ಸಂಖ್ಯೆಯಲ್ಲಿ ಬಂದಿರುವ ಅನಿವಾಸಿ ಭಾರತೀಯರು ಪ್ರಧಾನಿ ತಮ್ಮ ಹಿತ ಕಾಯುವ ಕೆಲ ಘೋಷಣೆ ಮಾಡಬಹುದೆಂಬ ನಿರೀಕ್ಷೆಯಲ್ಲಿದ್ದಾರೆ.
ಬೆಂಗಳೂರು(ಜ.08):ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಪ್ರವಾಸಿ ಭಾರತೀಯ ದಿವಸ್'ನ ಅಧಿಕೃತ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಇವತ್ತು ಉದ್ಘಾಟಿಸಲಿದ್ದಾರೆ.
ತುಮಕೂರು ರಸ್ತೆಯಲ್ಲಿರುವ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಿನ್ನೆಯಿಂದ ಆರಂಭವಾಗಿರುವ ಪ್ರವಾಸಿ ಭಾರತೀಯ ದಿವಸ್'ನ ಅಧಿಕೃತ ಕಾರ್ಯಕ್ರಮ ಉದ್ಘಾಟಿಸಿ ಭಾಷಣ ಮಾಡಲಿರುವ ಪ್ರಧಾನಮಂತ್ರಿಯವರತ್ತ ಎಲ್ಲರ ಚಿತ್ತ ನೆಟ್ಟಿದೆ. ವಿಶೇಷ ಕಾರ್ಯಕ್ರಮಕ್ಕೆ ದೊಡ್ಡ ಸಂಖ್ಯೆಯಲ್ಲಿ ಬಂದಿರುವ ಅನಿವಾಸಿ ಭಾರತೀಯರು ಪ್ರಧಾನಿ ತಮ್ಮ ಹಿತ ಕಾಯುವ ಕೆಲ ಘೋಷಣೆ ಮಾಡಬಹುದೆಂಬ ನಿರೀಕ್ಷೆಯಲ್ಲಿದ್ದಾರೆ.
ಇನ್ನು ನೋಟುಗಳ ನಿಷೇಧ ಬಗ್ಗೆ ಈ ಕಾರ್ಯಕ್ರಮದ ಭಾಷಣದಲ್ಲೂ ಮೋದಿ ಮಾತನಾಡುವ ನಿರೀಕ್ಷೆ ಇದೆ.