ಮಾಜಿ ಪ್ರಧಾನಿ ವಾಜಪೇಯಿ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಶುಭ ಕೋರಿರುವ ಪ್ರಧಾನಿ ಮೋದಿ, ಅದರ ಸರಳತೆಯನ್ನು ಕೊಂಡಾಡಿದ್ದಾರೆ.

ಪಕ್ಷದ ಸಾಮಾನ್ಯ ಕಾರ್ಯಕರ್ತರೊಂದಿಗೆ ವಾಜಪೇಯಿ ವ್ಯವಹಾರ ಹೇಗಿತ್ತು? ಎಂಬ ಬಗ್ಗೆ ಪ್ರಧಾನಿ ಮೋದಿ ವಿಡಿಯೋ ಒಂದನ್ನು ಟ್ವೀಟ್ ಮಾಡಿದ್ದಾರೆ. ಸರಳ ವ್ಯಕ್ತಿತ್ವದ ವಾಜಪೇಯಿ ಕಾರ್ಯಕರ್ತರನ್ನು ತಬ್ಬಿಕೊಳ್ಳುವ ಈ ಹಳೇ ವಿಡಿಯೋ'ನಲ್ಲಿ ಮೋದಿಯವರನ್ನು ಕೂಡಾ ಕಾಣಬಹುದು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ವಾಜಪೇಯಿ ನಿವಾಸಕ್ಕೆ ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.