ಬೆಂಗಳೂರಿಗೆ ಮೋದಿ ಆಗಮನ : ಸಂಚಾರ ಮಾರ್ಗದಲ್ಲಿ ಬದಲಾವಣೆ

First Published 4, Feb 2018, 8:48 AM IST
Modi Rally In Bengaluru  Many Roads Block
Highlights

ನಗರದ ಅರಮನೆ ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ  ರ್ಯಾಲಿ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನಗರಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಅರಮನೆ ಮೈದಾನ ಮಾರ್ಗವಾಗಿ ಸಂಚರಿಸುವ ಸಾರ್ವಜನಿಕರು ಪ್ರತ್ಯೇಕ ಮಾರ್ಗದಲ್ಲಿ ಸಂಚರಿಸುವ ಮೂಲಕ ಸಹಕರಿಸಬೇಕೆಂದು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ಬೆಂಗಳೂರು : ನಗರದ ಅರಮನೆ ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ  ರ್ಯಾಲಿ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನಗರಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಅರಮನೆ ಮೈದಾನ ಮಾರ್ಗವಾಗಿ ಸಂಚರಿಸುವ ಸಾರ್ವಜನಿಕರು ಪ್ರತ್ಯೇಕ ಮಾರ್ಗದಲ್ಲಿ ಸಂಚರಿಸುವ ಮೂಲಕ ಸಹಕರಿಸಬೇಕೆಂದು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ಮೈಸೂರು ರಸ್ತೆ ಕಡೆಯಿಂದ ಬರುವ ವಾಹನಗಳು ನಾಯಂಡಹಳ್ಳಿ, ಸುಮನಹಳ್ಳಿ, ಡಾ.ರಾಜಕುಮಾರ್ ಸಮಾಧಿ, ತುಮಕೂರು ರಸ್ತೆ ಬಲ ತಿರುವು ಪಡೆದು ಗೊರಗುಂಟೆಪಾಳ್ಯ, ಬಿಇಎಲ್, ಹೆಬ್ಬಾಳ ಮೇಲ್ಸೇತುವೆ ಮಾರ್ಗವಾಗಿ ಅರಮನೆ ಮೈದಾನ ಪ್ರವೇಶಿಸಿ ಮಾವಿನಕಾಯಿ ಆವರಣದಲ್ಲಿ ವಾಹನ ನಿಲುಗಡೆ ಮಾಡಬಹುದು. 2ಕನಕಪುರ ರಸ್ತೆ ಕಡೆಯಿಂದ ಬರುವ ವಾಹನಗಳು ಕನಕಪುರ

ರಸ್ತೆ, ಬನಶಂಕರಿ ದೇವಸ್ಥಾನ ಬಸ್ ನಿಲ್ದಾಣ, ರಾಜಲಕ್ಷ್ಮೀ ಜಂಕ್ಷನ್, ಲಾಲ್‌ಬಾಗ್ ಪಶ್ಚಿಮ ಗೇಟ್, ಮಿನರ್ವ ವೃತ್ತ, ಜೆ.ಸಿ.ರಸ್ತೆ, ಟೌನ್‌ಹಾಲ್, ಕೆ.ಜಿ.ರಸ್ತೆ, ಮೈಸೂರು ಬ್ಯಾಂಕ್ ಬಳಿ ಬಲ ತಿರುವು ಪಡೆದು ಪ್ಯಾಲೇಸ್ ರಸ್ತೆ, ಬಸವೇಶ್ವರ ವೃತ್ತ, ಹಳೇ ಹೈಗ್ರೌಂಡ್ಸ್ ಅಂಡರ್‌ಪಾಸ್, ಜಯಮಹಲ್ ಮೂಲಕ ಸರ್ಕಸ್ ಮೈದಾನದ ಮೂಲಕ ಪ್ರವೇಶಿಸಬಹುದು.

ಬನ್ನೇರುಘಟ್ಟ ರಸ್ತೆ ಕಡೆಯಿಂದ ಬರುವ ವಾಹನಗಳು ಡೈರಿ ವೃತ್ತ ಎಡ ತಿರುವು ಪಡೆದು ಡಾ.ಮರಿಗೌಡ ರಸ್ತೆ, ಲಾಲ್‌ಬಾಗ್ ಮುಖ್ಯದ್ವಾರ, ಜೆ.ಸಿ.ರಸ್ತೆ ಮೂಲಕ ಅರಮನೆ ಮೈದಾನಕ್ಕೆ ಬರಬಹುದು. ಅದೇ ರೀತಿ ಹೊಸೂರು ಕಡೆಯಿಂದ ಬರುವ ವಾಹನಗಳು ಮಡಿವಾಳ ಚೆಕ್‌ಪೋಸ್ಟ್ ಎಡ ತಿರುವು ಪಡೆದು ಡೈರಿ ವೃತ್ತದ ಮಾರ್ಗದಲ್ಲಿ ಬಂದು ಅರಮನೆ ಮೈದಾನ ಪ್ರವೇಶಿಸಬಹುದು.

ದೊಡ್ಡಬಳ್ಳಾಪುರ ಕಡೆಯಿಂದ ಬರುವ ವಾಹನಗಳಿಗೆ ಮೇಜರ್ ಉನ್ನಿಕೃಷ್ಣ ರಸ್ತೆ ಜಂಕ್ಷನ್, ಯಲಹಂಕ ಪೊಲೀಸ್ ಠಾಣೆ ಜಂಕ್ಷನ್, ಬಳ್ಳಾರಿ ರಸ್ತೆ, ಹೆಬ್ಬಾಳ ಮೇಲ್ಸೇತುವೆ ಮೂಲಕ ಹಾಗೂ ಹಳೆ ಮದ್ರಾಸ್ ರಸ್ತೆ ಕಡೆಯಿಂದ ಆಗಮಿಸುವ ವಾಹನಗಳು ಕೆ.ಆರ್.ಪುರ ತೂಗು ಸೇತುವೆ, ಹೆಣ್ಣೂರು ಜಂಕ್ಷನ್, ನಾಗವಾರ, ಹೆಬ್ಬಾಳ ಮೇಲ್ಸೇತುವೆ ಮಾರ್ಗವಾಗಿ ಅರಮನೆ ಮೈದಾನ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ಬಳ್ಳಾರಿ ರಸ್ತೆ ಮಾರ್ಗವಾಗಿ ಬರುವ ವಾಹನಗಳು ದೇವನಹಳ್ಳಿ, ಚಿಕ್ಕಜಾಲ, ಹುಣಸಮಾರನಳ್ಳಿ, ಕೋಗಿಲು ಜಂಕ್ಷನ್, ಕೊಡಿಗೇಹಳ್ಳಿ ಗೇಟ್ ಹೆಬ್ಬಾಳ ಮಾರ್ಗವಾಗಿ ಬಂದು ಅರಮನೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ.

loader