#MeToo ಅಭಿಯಾನದಲ್ಲಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್ ವಿರುದ್ಧವೂ ಆರೋಪ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮೌನ ಮುರಿಯಬೇಕೆಂಬ ಬೇಡಿಕೆ ಬರುತ್ತಿದೆ.

ನವದೆಹಲಿ: ಮೀ ಟೂ ಅಭಿಯಾನದ ಭಾಗವಾಗಿ ವಿದೇಶಾಂಗ ಖಾತೆ ರಾಜ್ಯ ಸಚಿವ ಎಂ.ಜೆ. ಅಕ್ಬರ್‌ ವಿರುದ್ಧ ಕೇಳಿ ಬಂದಿರುವ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿಕೆ ನೀಡಬೇಕು ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್‌ ಸ್ವಾಮಿ ಶುಕ್ರವಾರ ಆಗ್ರಹಿಸಿದ್ದಾರೆ.

ಕ್ಬರ್‌ ಅವರ ವಿರುದ್ಧ ಆರೋಪ ಹೊರಿಸಿರುವುದು ಕೇವಲ ಒಬ್ಬ ಮಹಿಳೆಯಲ್ಲ. ಹಲವರು ಅಕ್ಬರ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿದ್ದಾರೆ. ನಾನು ಮೀ ಟೂ ಅಭಿಯಾನವನ್ನು ಬೆಂಬಲಿಸುತ್ತೇನೆ.

ದೀರ್ಘ ಸಮಯದ ಬಳಿಕ ಮಹಿಳೆಯರು ಹೇಳಿಕೆ ನೀಡುವುದರಲ್ಲಿ ತಪ್ಪೇನೂ ಇಲ್ಲ. ಈ ಕುರಿತು ಮೋದಿ ಅವರು ಹೇಳಿಕೆ ನೀಡಬೇಕು ಎಂದು ಸುಬ್ರಮಣಿಯನ್‌ ಸ್ವಾಮಿ ಹೇಳಿದ್ದಾರೆ.