ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಪ್ರಜಾತಂತ್ರ ವ್ಯವಸ್ಥೆಯಿಂದ ಸರ್ವಾಧಿಕಾರದೆಡೆಗೆ ಕೊಂಡೊಯ್ಯುತ್ತಿದ್ದಾರೆಂದು ಖರ್ಗೆ ಹೇಳಿದ್ದಾರೆ.
ಪಣಜಿ (ಮಾ.16): ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಪಕ್ಷ, ನರೇಂದ್ರ ಮೋದಿ ದೇಶವನ್ನು ಪ್ರಜಾತತಂತ್ರದಿಂದ ಸರ್ವಾಧಿಕಾದೆಡೆಗೆ ಕೊಂಡೊಯ್ಯುತ್ತಿದ್ದಾರೆಂದು ಹೇಳಿದೆ.
ಗೋವಾದಲ್ಲಿ ಬಿಜೆಪಿ ಸರ್ಕಾರ ರಚನೆ ಕುರಿತು ಮಾತನಾಡಿದ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಪ್ರಜಾತಂತ್ರ ವ್ಯವಸ್ಥೆಯಿಂದ ಸರ್ವಾಧಿಕಾರದೆಡೆಗೆ ಕೊಂಡೊಯ್ಯುತ್ತಿದ್ದಾರೆಂದು ಹೇಳಿದ್ದಾರೆ.
ಗೋವಾ ವಿಧಾನಸಭೆಯಲ್ಲಿಂದು 22 ಮತಗಳನ್ನು ಪಡೆಯುವ ಮೂಲಕ ಬಹುಮತ ಸಾಬೀತು ಪಡಿಸಿದೆ.
