ಪ್ರಧಾನಿ ಮೋದಿಗೆ ರಾಜ್ಯ ಕಾಂಗ್ರೆಸ್ ಮುಖಂಡ ಉಗ್ರಪ್ಪ ಧನ್ಯವಾದ ಹೇಳಿದ್ದು ಏಕೆ?

ಬೆಂಗಳೂರು: ರಾಜ್ಯದಲ್ಲಿನ ಹಿಂದುಳಿದ ವರ್ಗಗಳಿಗೆ ಸೇರಿದ್ದ ತಳವಾರ ಮತ್ತು ಪರಿವಾರ ಸಮುದಾಯಗಳನ್ನು ಪರಿಶಿಷ್ಟಪಂಗಡ ಪಟ್ಟಿಗೆ ಸೇರ್ಪಡೆ ಮಾಡಲು ನಿರ್ಧರಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯ ವಿ.ಎಸ್‌.ಉಗ್ರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಈ ನಿರ್ಧಾರದಿಂದ 10 ಲಕ್ಷಕ್ಕೂ ಹೆಚ್ಚು ಜನ ಪರಿಶಿಷ್ಟಪಂಗಡಕ್ಕೆ ಸೇರುವುದರಿಂದ ವಿಧಾನಸಭೆ ಹಾಗೂ ಲೋಕಸಭಾ ಸೀಟುಗಳಲ್ಲಿ ಎಸ್‌ಟಿ ಸಮುದಾಯಕ್ಕೆ ಮತ್ತಷ್ಟುಹೆಚ್ಚು ಪ್ರಾಶಸ್ತ್ಯ ನೀಡಬೇಕು. ಇದಕ್ಕಾಗಿ ಮೀಸಲು ಕ್ಷೇತ್ರಗಳ ಪುನರ್‌ ವರ್ಗೀಕರಣ ಮಾಡಬೇಕು ಎಂದು ಅವರು ಒತ್ತಾಯಿಸಿದರು.