ಪ್ರಧಾನ ಮಂತ್ರಿ ನರೇಂದ್ರ ಮೋದಿ ಇದೇ 29ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಅಂದು ಬೆಂಗಳೂರಿಗೆ ಆಗಮಿಸಲಿ ರುವ ಪ್ರಧಾನಿ, ಮಹಾನಗರದಲ್ಲಿ ಹಮ್ಮಿಕೊಂಡಿರುವ ಆದಿಚುಂಚನಗಿರಿ ಮಠದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇದೇ 29ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಅಂದು ಬೆಂಗಳೂರಿಗೆ ಆಗಮಿಸಲಿ ರುವ ಪ್ರಧಾನಿ, ಮಹಾನಗರದಲ್ಲಿ ಹಮ್ಮಿಕೊಂಡಿರುವ ಆದಿಚುಂಚನಗಿರಿ ಮಠದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ.

ಅಲ್ಲಿಂದ ಬೀದರ್‌ಗೆ ತೆರಳಲಿದ್ದು, ಕಲಬುರಗಿ-ಬೀದರ್ ಮಧ್ಯೆ ಈಗಾಗಲೇ ಪೂರ್ಣಗೊಂಡಿರುವ 104 ಕಿ.ಮೀ. ಉದ್ದದ ರೈಲುಮಾರ್ಗವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

ಈ ಬಗ್ಗೆ ಬೀದರ್ ಸಂಸದ ಭಗವಂತ ಖೂಬಾ ದೀಪಾವಳಿ ನರಕ ಚತುರ್ದಶಿ ದಿನದಂದು ಟ್ವೀಟ್ ಮಾಡಿದ್ದಾರೆ. ಬಳಿಕ ಅವರು ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಹಿಂದಿರುಗಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.