ಘನತೆವೆತ್ತ  ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರಿಗೆ ಭಾರತ ಭೂಮಿಗೆ ಸ್ವಾಗತ: ಫ್ರಧಾನಿ ಮೋದಿ ಟ್ವೀಟ್

ನವದೆಹಲಿ (ಜ.24): ಈ ಬಾರಿಯ ಗಣರಾಜ್ಯ ದಿನದ ಅತಿಥಿ ಅಬುಧಾಬಿಯ ಯುವರಾಜ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅರಬ್ಬೀ ಭಾಷೆಯಲ್ಲೇ ಟ್ವೀಟ್ ಮಾಡಿ ಸ್ವಾಗತಿಸಿದ್ದಾರೆ.

Scroll to load tweet…
Scroll to load tweet…

ಘನತೆವೆತ್ತ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರಿಗೆ ಭಾರತ ಭೂಮಿಗೆ ಸ್ವಾಗತ. ಗಣರಾಜ್ಯ ದಿನದಂದು ತಾವು ನಮ್ಮೊಂದಿಗಿರುವುದು ಸಂತೋಷ ತಂದಿದೆ ಎಂದು ಮೋದಿಯವರು ಹೇಳಿದ್ದಾರೆ. ಭಾರತ ಹಾಗೂ ಯುಏಇ ಉತ್ತಮ ಬಾಂಧವ್ಯ ಹೊಂದಿದ್ದು ಮುಂದಿನ ದಿನಗಳಲ್ಲಿ ಉಭಯರಾಷ್ಟ್ರಗಳ ನಡುವೆ ಪರಸ್ಪರ ಸಹಕಾರ ಇನ್ನಷ್ಟು ವೃದ್ಧಿಯಾಗಲಿದೆ ಎಂದು ಮೋದಿಯವರು ಹೇಳಿದ್ದಾರೆ.