ಕಾಶ್ಮೀರ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಕಾಶ್ಮೀರ ಹೊತ್ತಿ ಉರಿಯುತ್ತಿರುವುದಕ್ಕೆ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನೀತಿಗಳೇ ಕಾರಣವೆಂದು ಹೇಳಿದ್ದಾರೆ.

ನವೆದಹಲಿ: ಕಾಶ್ಮೀರ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಕಾಶ್ಮೀರ ಹೊತ್ತಿ ಉರಿಯುತ್ತಿರುವುದಕ್ಕೆ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನೀತಿಗಳೇ ಕಾರಣವೆಂದು ಹೇಳಿದ್ದಾರೆ.

ಕಾಶ್ಮೀರ ವಿಚಾರದಲ್ಲಿ ಚೀನಾ ಪ್ರಸ್ತಾಪವನ್ನು ಖಂಡಿಸಿದ ರಾಹುಲ್ ಗಾಂಧಿ, ಕಾಶ್ಮೀರವೆಂದರೆ ಭಾರತ, ಭಾರತವೆಂದರೆ ಕಾಶ್ಮೀರ, ಇಲ್ಲಿ ಮೂರನೆಯವರಿಗೆ ಮೂಗುತೂರಿಸಲು ಯಾವುದೇ ಆಸ್ಪದವಿಲ್ಲವೆಂದಿದ್ದಾರೆ.

ಹಿಝ್ಬುಲ್ ಮುಜಾಹಿದೀನ್ ಕಮಾಂಡರ್ ಬುರ್ಹಾನ್ ವಾನಿಯನ್ನು ಸೇನಾಪಡೆಯು ಕಳೆದ ವರ್ಷ ಜು. 8ರಂದು ಹೊಡೆದುರಳಿಸಿದ ಬಳಿಕ ಕಾಶ್ಮೀರ ಕಣಿವೆಯಲ್ಲಿ ಆರಂಭವಾಗಿರುವ ಉದ್ವಿಗ್ನ ಪರಿಸ್ಥಿತಿ ಇಂದಿಗೂ ಮುಂದುವರೆದಿದೆ.

ಕಾಶ್ಮೀರ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸುವ ನಿಟ್ಟಿನಲ್ಲಿ ರಚನಾತ್ಮಕ ಪಾತ್ರ ವಹಿಸುವುದಾಗಿ ಚೀನಾ ಹೇಳಿಕೊಂಡಿತ್ತು.