ಕಾಂಗ್ರೆಸ್‌ನಲ್ಲಿ ಮಹತ್ವದ ಬದಲಾವಣೆಗೆ ಮುಂದಾದ ರಾಹುಲ್ ಗಾಂಧಿ| ಏಕಾಏಕಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ| ಛತ್ತೀಸ್'ಗಡ್ ನೂತನ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮೋಹನ್ ಮಾರ್ಕಮ್ ಆಯ್ಕೆ| ಛತ್ತೀಸ್'ಗಡ್ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಸಿ ರಾಹುಲ್ ಗಾಂಧಿ ಆದೇಶ| ಮುಖ್ಯಮಂತ್ರಿ ಭೂಪೇಶ್ ಬಾಘೆಲ್ ಅವರಿಂದ ಸಿಪಿಸಿಸಿ ಅಧ್ಯಕ್ಷ ಪಟ್ಟ ಕಸಿದ ರಾಹುಲ್|
ನವದೆಹಲಿ(ಜೂ.28): ಮಹತ್ವದ ಬೆಳವಣಿಗೆಯೊಂದರಲ್ಲಿ ಛತ್ತೀಸ್'ಗಡ್ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಸಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆದೇಶ ಹೊರಡಿಸಿದ್ದಾರೆ.
ಛತ್ತೀಸ್'ಗಡ್ ನೂತನ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮೋಹನ್ ಮಾರ್ಕಮ್ ಅವರನ್ನು ನೇಮಿಸಿ ರಾಹುಲ್ ಆದೇಶ ಹೊರಡಿಸಿದ್ದಾರೆ. ಈ ಕೂಡಲೇ ಮೋಹನ್ ಮರ್ಕಮ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮುಖ್ಯಮಂತ್ರಿ ಭೂಪೇಶ್ ಬಾಘೆಲ್ ಛತ್ತೀಸ್'ಗಡ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರ ನೇತೃತ್ವದಲ್ಲಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಪಡೆದ ಕಾಂಗ್ರೆಸ್, ಲೋಕಸಭೆ ಚುನಾವಣೆಯಲ್ಲಿ ಕೇವಲ ಎರಡು ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಾರೀ ಮುಖಭಂಗ ಅನುಭವಿಸಿತ್ತು.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ, ಮೋಹನ್ ಮಾರ್ಕಮ್ ಅವರನ್ನು ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎನ್ನಾಲಾಗಿದೆ.
