ಹರ್ಯಾಣದಲ್ಲಿ ನಡೆಯುತ್ತಿರುವ ಹಿಂಸಾಚಾರ ವಿಚಾರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಚಿಕ್ಕಬಳ್ಳಾಪುರ: ಹರ್ಯಾಣದಲ್ಲಿ ನಡೆಯುತ್ತಿರುವ ಹಿಂಸಾಚಾರ ವಿಚಾರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ ಗುರ್ಮೀತ್  ರಾಮ್ ರಹೀಂ ಬಾಬಾ ದೋಷಿ ಎಂದು  ಸಿಬಿಐ ವಿಶೇಷ ನ್ಯಾಯಾಲಯ  ತೀರ್ಪು ನೀಡಿದ ಬೆನ್ನಲ್ಲೇ ಬಾಬಾನ ಬೆಂಬಲಿಗರು  ನಡೆಸಿದ ದಾಂಧಲೆಗೆ  ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ  ವೀರಪ್ಪ ಮೋಯ್ಲಿ ಹರ್ಯಾಣ ಮುಖ್ಯಮಂತ್ರಿ ಖಟ್ಟರ್ ರಾಜಿನಾಮೆಗೆ ಆಗ್ರಹಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು ಖಟ್ಟರ್ ಸಿಎಂ ಆಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.