ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಾಶಯಗಳು ಭರ್ತಿಯಾಗುತ್ತಿವೆ. ಇನ್ನು ಒಂದು ವಾರದಲ್ಲಿ ಕೆಆರ್‌ಎಸ್‌ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ. 

ಬೆಂಗಳೂರು: ಈ ತಿಂಗಳ 20ರಂದು ತಲಕಾವೇರಿಗೆ ಪೂಜೆ ಸಲ್ಲಿಸಿ ಕೃಷ್ಣರಾಜಸಾಗರ ಮತ್ತು ಕಬಿನಿ ಜಲಾಶಯಗಳಿಗೆ ಬಾಗಿನ ಅರ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. 

ಸಭೆಯೊಂದರಲ್ಲಿ ಮಾತನಾಡಿ, ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಾಶಯಗಳು ಭರ್ತಿಯಾಗುತ್ತಿವೆ. ಇನ್ನು ಒಂದು ವಾರದಲ್ಲಿ ಕೆಆರ್‌ಎಸ್‌ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ. 

ತಮಿಳುನಾಡಿಗೆ ನೀರು ಹರಿಸಲು ಯಾವುದೇ ಸಮಸ್ಯೆ ಇಲ್ಲ. 20ರಂದು ಬಾಗಿನ ಅರ್ಪಿಸುವ ಮೊದಲು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆಯುವೆ ಎಂದರು.