ಮುಂಬರಲಿರುವ ಉತ್ತರಪ್ರದೇಶ ಚುನಾವಣೆಗೆ ಸಮಾಜವಾದಿ ಪಕ್ಷ ಚುನಾವಣಾ ಪ್ರಣಾಳಿಕೆಯನ್ನು ಬಿಡಗಡೆ ಮಾಡಿದ ಬೆನ್ನಲ್ಲೆ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ವಾಗ್ದಾಳಿ ನಡೆಸಿದ್ದಾರೆ.ಉತ್ತರ ಪ್ರದೇಶದಲ್ಲಿ ಕುಟುಂಬ ರಾಜಕಾರಣ ಬಂದ ನಂತರ ಅಭಿವೃದ್ಧಿಗಿಂತ ಅರಾಜಕತೆ ಮತ್ತು ಅಪರಾಧಗಳು ಹೆಚ್ಚಾಗಿವೆ ಎಂದು ಕಿಡಿಕಾರಿದ್ದಾರೆ.

ನವದೆಹಲಿ (ಜ.22): ಮುಂಬರಲಿರುವ ಉತ್ತರಪ್ರದೇಶ ಚುನಾವಣೆಗೆ ಸಮಾಜವಾದಿ ಪಕ್ಷ ಚುನಾವಣಾ ಪ್ರಣಾಳಿಕೆಯನ್ನು ಬಿಡಗಡೆ ಮಾಡಿದ ಬೆನ್ನಲ್ಲೆ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಕುಟುಂಬ ರಾಜಕಾರಣ ಬಂದ ನಂತರ ಅಭಿವೃದ್ಧಿಗಿಂತ ಅರಾಜಕತೆ ಮತ್ತು ಅಪರಾಧಗಳು ಹೆಚ್ಚಾಗಿವೆ ಎಂದು ಕಿಡಿಕಾರಿದ್ದಾರೆ.

ಸಮಾಜವಾದಿ ಸರ್ಕಾರ ಆಡಳಿತದಲ್ಲಿದ್ದ ಕಳೆದ 5 ವರ್ಷಗಳಲ್ಲಿ ಅಪರಾಧ ಚಟುವಟಿಕೆಗಳು ಮತ್ತು ಅರಾಜಕತೆ ಹೆಚ್ಚಾಗಿದೆ. ಇದನ್ನು ಯಾರಿಂದಲೂ ಮುಚ್ಚಿಡುವ ಅಗತ್ಯವಿಲ್ಲ. ಬೇರೆ ಬೇರೆ ಘೋಷಣೆಗಳನ್ನು ಮಾಡುವ ಮೂಲಕ ಜನರನ್ನು ಮರಳು ಮಾಡಲು ಯತ್ನಿಸುತ್ತಿದ್ದಾರೆ. ಆದರೆ ಈ ಬಾರಿ ಜನ ನಂಬುವುದಿಲ್ಲ. ಕಳೆದ 5 ವರ್ಷಗಳಲ್ಲಿ ಏನಾಗಿದೆ ಎಂಬುದನ್ನು ಸಮಾಜವಾದಿ ಪಕ್ಷ ಈ ಬಾರಿ ಚುನಾವಣೆಯಲ್ಲಿ ನೋಡಲಿದೆ ಎಂದು ಮಾಯಾವತಿ ಗುಡುಗಿದ್ದಾರೆ.

ಮಹಿಳಾ ಸುರಕ್ಷತೆ ಬಗ್ಗೆ ಮಾತನಾಡಿದ ಮುಲಯಾಂ ಸಿಂಗ್ ಮಾತಿಗೆ ಪ್ರತಿಕ್ರಿಯಿಸುತ್ತಾ, ಅಭಿವೃದ್ಧಿಯ ಜೊತೆ ಜನರು ತಮ್ಮ ಜೀವ, ಗೌರವ ಮತ್ತು ಸಂಸ್ಕೃತಿಯನ್ನು ರಕ್ಷಿಸಬೇಕೆಂದು ಬಯಸುತ್ತಾರೆ. ಸಮಾಜವಾದಿ ಪಕ್ಷದ ಮಹಿಳಾ ಸುರಕ್ಷತೆ ಯಾವಾಗಲೂ ಪ್ರಶ್ನಾರ್ಥಕವಾಗಿರುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.