ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಬೆಟ್ಟದಲ್ಲಿ ಮಾಜಿ ಶಾಸಕಿ ಪರಿಮಳಾ ನಾಗಪ್ಪ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯಡಿಯೂರಪ್ಪ ರಾಜ್ಯದಲ್ಲಿ ಬಿಜೆಪಿ ಪರವಾಗಿ ಅಲೆ ಸೃಷ್ಟಿಯಾಗಿದೆ ಎಂದಿದ್ದಾರೆ.
ಚಾಮರಾಜನಗರ (ಮಾ. 16): ಕಾಂಗ್ರೆಸ್'ನ ಕೆಲವು ಶಾಸಕರುಗಳು ನನ್ನ ಸಂಪರ್ಕದಲ್ಲಿರುವುದು ನಿಜ. ಆದರೆ ಈಗಲೇ ಎಲ್ಲವನ್ನು ಹೇಳಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯುಡಿಯೂರಪ್ಪ ಹೇಳಿದ್ದಾರೆ.
ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಬೆಟ್ಟದಲ್ಲಿ ಮಾಜಿ ಶಾಸಕಿ ಪರಿಮಳಾ ನಾಗಪ್ಪ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯಡಿಯೂರಪ್ಪ ರಾಜ್ಯದಲ್ಲಿ ಬಿಜೆಪಿ ಪರವಾಗಿ ಅಲೆ ಸೃಷ್ಟಿಯಾಗಿದೆ. ಈಗಾಗಲೇ ಬೇರೆ ಬೇರೆ ಪಕ್ಷದ ಶಾಸಕರು ನಿರಂತರವಾಗಿ ಸಂಪರ್ಕದಲ್ಲಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಮಾಜಿ ಶಾಸಕಿ ಪರಿಮಳಾ ನಾಗಪ್ಪ ಯಾವುದೇ ಷರತ್ತಿಲ್ಲದೇ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಟಿಕೇಟ್ ನೀಡುವ ಬಗ್ಗೆ ನಿರ್ಧರಿಸಲಾಗುವುದು. ಹನೂರಿಗೆ ಯಾರು ಅಭ್ಯರ್ಥಿ ಎಂಬ ಪ್ರಶ್ನೆ ಈಗಲೇ ಉದ್ಬವವಾಗುವುದಿಲ್ಲ ಎಂದು ಯಡಿಯೂರಪ್ಪ ತಿಳಿಸಿದರು.
