Asianet Suvarna News Asianet Suvarna News

ರೋಹಿಂಗ್ಯಾ ಮುಸ್ಲಿಮರ ಬೆಂಬಲಕ್ಕೆ ವರುಣ್: ವಿವಾದ

ಅಕ್ರಮವಾಗಿ ದೇಶದಲ್ಲಿ ನೆಲೆಸಿರುವ ಮ್ಯಾನ್ಮಾರ್ ಮೂಲದ ರೋಹಿಂಗ್ಯಾ ಮುಸ್ಲಿಮರನ್ನು ಗಡೀಪಾರು ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ್ದರೂ, ಅದಕ್ಕೆ ತದ್ವಿರುದ್ಧವಾದ ಅಭಿಪ್ರಾಯವನ್ನು ಬಿಜೆಪಿ ಸಂಸದ ವರುಣ್ ಗಾಂಧಿ ವ್ಯಕ್ತಪಡಿಸಿರುವುದು ವಿವಾದಕ್ಕೆ ಕಾರಣವಾಗಿದೆ. ‘ದ್ರತಾ ಪರಿಶೀಲನೆ ಬಳಿಕ ರೋಹಿಂಗ್ಯಾ ಮುಸ್ಲಿಮರಿಗೆ ಭಾರತದಲ್ಲಿ ಆಶ್ರಯ ನೀಡಬೇಕು ಎಂದು ವರುಣ್ ಅವರು ಹಿಂದಿ ದೈನಿಕವೊಂದರಲ್ಲಿ ಲೇಖನ ಬರೆದಿದ್ದಾರೆ.

MoS Home Hansraj Ahir slams Varun Gandhi for comments on Rohingyas

ನವದೆಹಲಿ(ಸೆ.27): ಅಕ್ರಮವಾಗಿ ದೇಶದಲ್ಲಿ ನೆಲೆಸಿರುವ ಮ್ಯಾನ್ಮಾರ್ ಮೂಲದ ರೋಹಿಂಗ್ಯಾ ಮುಸ್ಲಿಮರನ್ನು ಗಡೀಪಾರು ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ್ದರೂ, ಅದಕ್ಕೆ ತದ್ವಿರುದ್ಧವಾದ ಅಭಿಪ್ರಾಯವನ್ನು ಬಿಜೆಪಿ ಸಂಸದ ವರುಣ್ ಗಾಂಧಿ ವ್ಯಕ್ತಪಡಿಸಿರುವುದು ವಿವಾದಕ್ಕೆ ಕಾರಣವಾಗಿದೆ. ‘ದ್ರತಾ ಪರಿಶೀಲನೆ ಬಳಿಕ ರೋಹಿಂಗ್ಯಾ ಮುಸ್ಲಿಮರಿಗೆ ಭಾರತದಲ್ಲಿ ಆಶ್ರಯ ನೀಡಬೇಕು ಎಂದು ವರುಣ್ ಅವರು ಹಿಂದಿ ದೈನಿಕವೊಂದರಲ್ಲಿ ಲೇಖನ ಬರೆದಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಹಂಸರಾಜ್ ಅಹೀರ್, ಮನಸ್ಸಿನಲ್ಲಿ ರಾಷ್ಟ್ರೀಯ ಹಿತಾಸಕ್ತಿ ತುಂಬಿಕೊಂಡಿರುವವರು ಈ ರೀತಿಯ ಹೇಳಿಕೆ ನೀಡಬಾರದು ಎಂದು ತಾಕೀತು ಮಾಡಿದ್ದಾರೆ.

ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ವರುಣ್, ನಿರಾಶ್ರಿತರಿಗೆ ಆಶ್ರಯ ನೀಡುವ ಭಾರತದ ನೀತಿಯನ್ನು ವಿಶ್ಲೇಷಿಸಿ ಬರೆದಿದ್ದೆ ಎಂದು ತಿಳಿಸಿದ್ದಾರೆ. ರೋಹಿಂಗ್ಯಾ ಮುಸ್ಲಿಮರನ್ನು ಗಡೀಪಾರು ಮಾಡುವುದಾಗಿ ಗೃಹ ಸಚಿವ ರಾಜನಾಥ ಸಿಂಗ್ ತಿಳಿಸಿದ್ದರು.

 

Follow Us:
Download App:
  • android
  • ios