ಇಬ್ಬರು ಮಕ್ಕಳಿಗೆ ನೇಣು ಹಾಕಿದ ತಾಯಿ ಬಳಿಕ ತಾನೂ ಆತ್ಮಹತ್ಯೆ ಮಾಡಕೊಂಡ ಮನಕಲುಕುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು(ಸೆ.01): ಇಬ್ಬರು ಮಕ್ಕಳಿಗೆ ನೇಣು ಹಾಕಿದ ತಾಯಿ ಬಳಿಕ ತಾನೂ ಆತ್ಮಹತ್ಯೆ ಮಾಡಕೊಂಡ ಮನಕಲುಕುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಹಲಸೂರು ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, 6 ವರ್ಷದ ನಿಶ್ಚಿತಾ ಮತ್ತು 10 ತಿಂಗಳ ಮಗು ಪಾವನಿಗೆ ನೇಣು ಹಾಕಿದ ತಾಯಿ ರೇಣುಕಾ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಖಾಸಗಿ ಆಸ್ಪತ್ರೆಯಲ್ಲಿ ಟೆಕ್ನೀಷಿಯನ್ ಆಗಿ ಆಗಿ ಕೆಲಸ ಮಾಡುತ್ತಿದ್ದ ರೇಣುಕಾ ಮನೆಯಲ್ಲಿ ಗಂಡನಿಲ್ಲದ ಸಮಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ರೇಣುಕಾ ಗಂಡ ಸುಮಾರು 35 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದ. ಹೀಗಾಗಿ ಪತಿಯ ಸಾಲದ ಹೊರೆಯಿಂದ ಬೇಸತ್ತ ರೇಣುಕಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹಲಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
