ಇಲ್ಲಿನ ಬಾಲಘಾಟ್ ಜಿಲ್ಲೆಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿ 22 ಮಂದಿ ಮೃತಪಟ್ಟಿದ್ದು ಹಲವಾರು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ 40 ಕ್ಕೆರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.  

ಬಾಲಘಾಟ್ (ಮಧ್ಯಪ್ರದೇಶ) (ಜೂ.07): ಇಲ್ಲಿನ ಬಾಲಘಾಟ್ ಜಿಲ್ಲೆಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿ 22 ಮಂದಿ ಮೃತಪಟ್ಟಿದ್ದು ಹಲವಾರು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ 40 ಕ್ಕೆರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸ್ಪೋಟ ಸಂಭವಿಸುವಾಗ ಸುಮಾರು 40-45 ಕೆಲಸಗಾರರು ಕಾರ್ಖಾನೆಯೊಳಗೆ ಕೆಲಸ ಮಾಡುತ್ತಿದ್ದರು. ಅವಘಡದಲ್ಲಿ ಮೃತಪಟ್ಟ, ಗಾಯಗೊಂಡವರಿಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಂತಾಪ ಸೂಚಿಸಿದ್ದಾರೆ. ಮೃತರ, ಗಾಯಾಳುಗಳ ಸಂಬಂಧಿಕರಿಗೆ 2 ಲಕ್ಷ ರೂ ನೀಡುವುದಾಗಿ ಘೋಷಿಸಿದ್ದಾರೆ. ಗಾಯಾಳುಗಳ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.

(ಸಾಂದರ್ಭಿಕ ಚಿತ್ರ)