ಅಣ್ಣನ ಪರ ತಮ್ಮನ ಬ್ಯಾಟಿಂಗ್

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 6, Sep 2018, 9:45 PM IST
MP DK Suresh Meets Minister Ramesh jarkiholi
Highlights

ನಿಮ್ಮ ಜಿಲ್ಲೆಯ ರಾಜಕಾರಣದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಮಧ್ಯೆ ಪ್ರವೇಶ ಮಾಡೋದಿಲ್ಲ ಪಿಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಮಧ್ಯೆ ಪ್ರವೇಶ ಮಾಡುವಷ್ಟು ಶಿವಕುಮಾರ್ ಸಣ್ಣವರಲ್ಲ. ನಿಮ್ಮ ಸಮಸ್ಯೆಯನ್ನು ನೀವೇ ಪರಿಹಾರ ಮಾಡಿಕೊಳ್ಳಿ  ಎಂದು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು[ಸೆ.06]: ಬೆಳಗಾವಿ ರಾಜಕಾರಣದಲ್ಲಿ ಡಿ.ಕೆ.ಶಿವಕುಮಾರ್ ಹೆಸರು ಪ್ರಸ್ತಾಪವಾದ ಹಿನ್ನಲೆಯಲ್ಲಿ  ಅಣ್ಣ ಡಿ.ಕೆ.ಶಿವಕುಮಾರ್ ಬೆಂಬಲಕ್ಕೆ ಸಹೋದರ ಡಿ.ಕೆ.ಸುರೇಶ್ ಎಂಟ್ರಿ ಕೊಟ್ಟಿದ್ದಾರೆ.

ಕಳೆದ ಭಾನುವಾರ ರಾತ್ರಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದ ಡಿ.ಕೆ.ಸುರೇಶ್, ಬೆಳಗಾವಿ ರಾಜಕಾರಣದ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಹೆಸರು ಪ್ರಸ್ತಾಪಿಸಬೇಡಿ. ನಿಮ್ಮ ಜಿಲ್ಲೆಯ ರಾಜಕಾರಣದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಮಧ್ಯೆ ಪ್ರವೇಶ ಮಾಡೋದಿಲ್ಲ ಪಿಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಮಧ್ಯೆ ಪ್ರವೇಶ ಮಾಡುವಷ್ಟು ಶಿವಕುಮಾರ್ ಸಣ್ಣವರಲ್ಲ. ನಿಮ್ಮ ಸಮಸ್ಯೆಯನ್ನು ನೀವೇ ಪರಿಹಾರ ಮಾಡಿಕೊಳ್ಳಿ  ಎಂದು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ನಾಳೆ ಬೆಳಿಗ್ಗೆ ಬೆಳಗಾವಿಯಲ್ಲಿ ಪಿ ಎಲ್ ಡಿ ಬ್ಯಾಂಕ್ ಚುನಾವಣೆ ನಡೆಯಲಿದ್ದು  ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿತರು ಗೆಲುವು ಸಾಧಿಸಿದರೆ ತಾವು ಹಾಗೂ ತಮ್ಮ ಸಹೋದರ ದೃಢವಾದ ರಾಜಕೀಯ ನಿರ್ಧಾರ ಕೈಗೊಳ್ಳುವುದಾಗಿ ಸಚಿವ ರಮೇಶ್ ಜಾರಕಿಕೊಳಿ ಸ್ಪಷ್ಟಪಡಿಸಿದ್ದಾರೆ. 14 ಮಂದಿಯ ಬ್ಯಾಂಕ್ ನಿರ್ದೇಶಕ ಮಂಡಳಿಯಲ್ಲಿ 9 ಲಕ್ಷ್ಮಿ ಅವರ ಪರ ಹಾಗೂ ಐವರು ರಮೇಶ್ ಜಾರಕಿಹೊಳಿ ಅವರನ್ನು ಬೆಂಬಲಿಸಲಿದ್ದಾರೆ.

ಈ ಸುದ್ದಿಯನ್ನು ಓದಿ: 'ನಮ್ಮ ಕುಟುಂಬದ ವಿರುದ್ಧ ತಿರುಗಿಬಿದ್ದಿದವರು ಅಳಿದು ಹೋದರು'

loader