ಕಾರ್ಯಕರ್ತರು ಮೈಮರೆತರೆ ವಾಜಪೇಯಿಗೆ ಆದ ಗತಿ ಮೋದಿಗೂ ಬರಲಿದೆ

  • ಬಿಜೆಪಿ ಕಾರ್ಯಕರ್ತರು ಮೋದಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕಿದೆ
  • ಸರ್ಕಾರದ ಅಭಿವೃದ್ಧಿ ಸಾಧನೆಗಳ ಪ್ರಚಾರದ ಕೊರತೆಯಿಂದ ವಾಜಪೇಯಿ ಸೋಲಿಗೆ ಕಾರಣ    

Share this Video
  • FB
  • Linkdin
  • Whatsapp

ದಾವಣಗೆರೆ[ಜು.29]:  ಬಿಜೆಪಿ ಕಾರ್ಯಕರ್ತರು ಮೈ ಮರೆತರೆ ವಾಜಪೇಯಿ ಅವರಿಗೆ ಆದ ಗತಿಯೇ ನರೇಂದ್ರ ಮೋದಿ ಅವರಿಗೂ ಬರಲಿದೆ ಎಂದು ಕೇಂದ್ರದ ಮಾಜಿ ಸಚಿವ ಆತಂಕ ವ್ಯಕ್ತಪಡಿಸಿದರು. 

ನಗರದ ಜಿಎಂಐಟಿ ಕಾಲೇಜ್ ನಲ್ಲಿ ನಡೆದ ರಾಜ್ಯ ಮಹಿಳಾ ಮೋರ್ಚಾದ ಪ್ರಶಿಕ್ಷಣ ಶಿಬಿರದಲ್ಲಿ ಮಾತನಾಡಿದ ಅವರು, ವಾಜಪೇಯಿ ಅವರು ದೇಶದ ಜನತೆಗೆ ಸರ್ವ ಶಿಕ್ಷಣ ಅಭಿಯಾನ, ಗ್ರಾಮ ಸಡಕ್ ಯೋಜನಂತಹ ಅನೇಕ ಯೋಜನೆ ಕೊಟ್ಟಿದ್ದರು. ಆದರೂ ಮುಂದೆ ನಡೆದ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿತು. ಕಾರ್ಯಕರ್ತರು ವಾಜಪೇಯಿ ಸರ್ಕಾರ ಮಾಡಿದ ಸಾಧನೆಗಳನ್ನು ಸಾರ್ವಜನಿಕರಿಗೆ ಸರಿಯಾಗಿ ಮಾಹಿತಿ ನೀಡಲಿಲ್ಲ. ಇದು ಬಿಜೆಪಿ ಸೋಲಿಗೆ ಪ್ರಮುಖ ಕಾರಣವಾಯಿತು ಎಂದರು.

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಸಾಧನೆಗಳನ್ನು ಜನರಿಗೆ ಮಾಹಿತಿ ನೀಡದಿದ್ದರೆ ವಾಜಪೇಯಿ ಅವರಿಗೆ ಆದ ಗತಿಯೇ ಮೋದಿಯವರು ಅನುಭವಿಸುವ ಸಾಧ್ಯತೆಯಿದೆ ಎಂದರು. 

ಎಲ್ಲ ಬಿಜೆಪಿ ಕಾರ್ಯಕರ್ತರು ಮೋದಿ ಸರ್ಕಾರದ ಸಾಧನೆ ಬಗ್ಗೆ ಜನತೆಗೆ ತಿಳಿಸಬೇಕು. ಈಗಿನಿಂದಲೇ ಎಚ್ಚೆತ್ತುಕೊಂಡು ಸರ್ಕಾರದ ಅಭಿವೃದ್ಧಿ ಸಾಧನೆಗಳನ್ನು ತಿಳಿಹೇಳಬೇಕು ಎಂದು ತಿಳಿಸಿದರು.

Related Video