(ವಿಡಿಯೋ) ಪೊಲೀಸ್ ಅಧಿಕಾರಿಗಳ ಮೇಲೆ ಸಂಸದ ನಳೀನ್ ಕುಮಾರ್ ದರ್ಪ

ಕದ್ರಿ(ಸೆ.07): ಪೊಲೀಸ್ ಅಧಿಕಾರಿಗಳ ಮೇಲೆ ಸಂಸದ ನಳೀನ್ ಕುಮಾರ್ ಕಟೀಲ್ ದರ್ಪ ತೋರಿದ್ದಾರೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರ ಮೇಲೆ ಪ್ರಕರಣ ದಾಖಲಿಸಲು ಹೋದ ಕಾರಣಕ್ಕೆ ಎಸ್'ಐ ವಿರುದ್ಧ ಕಿಡಿಕಾರಿದ್ದಾರೆ.

ರಾಲಿ ವೇಳೆ ಕಾರ್ಯಕರ್ತರನ್ನು ಕರೆದೋಯ್ದು ಪ್ರಕರಣ ದಾಖಲಿಸಲು ಯತ್ನಿಸಿದ ಕಾರಣ ಕದ್ರಿ ಠಾಣಾ ಇನ್ಸ್‌ಪೆಕ್ಟರ್ ಮಾರುತಿ ನಾಯಕ್ ಅವರನ್ನು ತರಾಟೆಗೆ ತೆಗೆದುಕೊಂಡು, ಒಂದು ವೇಳೆ ಪ್ರಕರಣ ದಾಖಲಿಸಿದರೆ ಜಿಲ್ಲಾ ಬಂದ್'ಗೆ ಕರೆ ಕೊಡುವುದಾಗಿ ಎಚ್ಚರಿಕೆ ನೀಡಿದರು.