ಭೋಪಾಲ್‌: ತಮ್ಮ ಕ್ಷೇತ್ರದಲ್ಲಿ ಕೆಲಸ ಮಾಡದ ಜನಪ್ರತಿನಿಧಿಗಳು ನಾಪತ್ತೆಯಾಗಿದ್ದಾರೆ ಎಂದು ಕೆಲವೆಡೆ ಬೋರ್ಡ್‌ಗಳನ್ನು ಹಾಕುವುದು ನೋಡಿದ್ದೇವೆ. ಆದರೆ ಇಲ್ಲೊಬ್ಬ ಕಾಂಗ್ರೆಸ್‌ ಶಾಸಕರು ನಾಪತ್ತೆಯಾಗಿರುವುದಕ್ಕೆ ಸ್ವತಃ ಪೊಲೀಸರೇ ಬಹುಮಾನ ಘೋಷಿಸಿದ್ದಾರೆ.

ಮಧ್ಯಪ್ರದೇಶ ಕಾಂಗ್ರೆಸ್‌ ಶಾಸಕ ಹೇಮಂತ್‌ ಕಟಾರೆ ಬಗ್ಗೆ ಮಾಹಿತಿ ನೀಡಿದಲ್ಲಿ 10,000 ರು. ಬಹುಮಾನ ಘೋಷಿಸಲಾಗಿದೆ. ಅತ್ಯಾಚಾರ ಮತ್ತು ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಹಲವು ಬಾರಿ ಸಮನ್ಸ್‌ಗಳನ್ನು ಜಾರಿಗೊಳಿಸಿದ್ದರೂ, ಹಾಜರಾಗದ ಹಿನ್ನೆಲೆಯಲ್ಲಿ ಪೊಲೀಸರು ಬಹುಮಾನ ಘೋಷಿಸಿದ್ದಾರೆ.

ಕಟಾರೆಯಿಂದ ಹಣ ಸುಲಿಗೆಗೆ ಯತ್ನಿಸಿದ್ದ ಆರೋಪದಲ್ಲಿ 21 ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿನಿಯನ್ನು ಬಂಧಿಸಲಾಗಿತ್ತು. ಜೈಲಿನಲ್ಲಿರುವ ಆಕೆ, ಕಟಾರೆ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ನಡೆಸಿರುವ ಆರೋಪ ಮಾಡಿದ್ದಾಳೆ.