ದೀಪಕ್ ಭೀಕರ ಹತ್ಯೆ ಖಂಡಿಸಿ ಕರ ಪತ್ರ ಹಿಡಿದು ಸಂಸತ್ತಿನ ಗಾಂಧಿ ಪ್ರತಿಮೆ ಎದುರು ಬಿಜೆಪಿ ಸಂಸದರು ಪ್ರತಿಭಟನೆ ನಡೆಸುತ್ತಿದ್ದು, ಶೂನ್ಯವೇಳೆಯಲ್ಲಿ ವಿಚಾರ ಪ್ರಸ್ತಾಪಿಸುವ ಆಲೋಚನೆಯಲ್ಲಿದ್ದಾರೆ.
ಬೆಂಗಳೂರು(ಜ.04): ದೀಪಕ್ ರಾವ್ ಕೊಲೆಯನ್ನು ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆಗೆ ಮುಂದಾಗಿದ್ದು, ಸಂಸದ ಪ್ರತಾಪ್ ಸಿಂಹ 'ಸಾವಿನ ಸಂಖ್ಯೆ 21: ಇನ್ನೆಷ್ಟು ಕೊಲೆಗಳನ್ನು ನೀವು ಬಯಸುತ್ತೀರ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ರಮಾನಾಥ್ ರೈ ಹಾಗೂ ರಾಮಲಿಂಗಾ ರೆಡ್ಡಿ ಅವರನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.
ದೀಪಕ್ ಭೀಕರ ಹತ್ಯೆ ಖಂಡಿಸಿ ಕರ ಪತ್ರ ಹಿಡಿದು ಸಂಸತ್ತಿನ ಗಾಂಧಿ ಪ್ರತಿಮೆ ಎದುರು ಬಿಜೆಪಿ ಸಂಸದರು ಪ್ರತಿಭಟನೆ ನಡೆಸುತ್ತಿದ್ದು, ಶೂನ್ಯವೇಳೆಯಲ್ಲಿ ವಿಚಾರ ಪ್ರಸ್ತಾಪಿಸುವ ಆಲೋಚನೆಯಲ್ಲಿದ್ದಾರೆ.
ಇನ್ನು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಆರ್. ಅಶೋಕ್, ದೀಪಕ್ ರಾವ್ ಹಿಂದು ಪರ ಸಂಘಟನೆ ಯುವಕ. ದೀಪಕ್ ಹತ್ಯೆ ಪಿಎಫ್'ಐ ಕೈವಾಡವಿದೆ. ಹಿಂದುಗಳ ಕೊಲೆಗೆ ಕಾಂಗ್ರೆಸ್ ಸರ್ಕಾರ ನೇರ ಹೊಣೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ನಾವು ಅಧಿಕಾರದಲ್ಲಿದ್ದಾಗ ನಿಮ್ಮ ಪಕ್ಷದ ಕಾರ್ಯಕರ್ತರ ಕೊಲೆ ಆಗಿತ್ತಾ? ಪಿಎಫ್'ಐಗೆ ಸರ್ಕಾರದ ಕುಮ್ಮಕ್ಕಿದೆ. ದೀಪಕ್ ಕೊಲೆಗೆ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಲಿ ಎಂದು ವಿಧಾನಸಭೆ ವಿಪಕ್ಷ ನಾಯಕ ಆಗ್ರಹ ಪಡಿಸಿದರು.