ಸಂಸದರ ಅತಿವೇಗದ ಡ್ರೈವಿಂಗ್ ಕಂಡು ಮಹಿಳಾ ಪೊಲೀಸ್ ಅಧಿಕಾರಿ ದೂರ ಸರಿದಿದ್ದಾರೆ. ಮಹಿಳಾ ಅಧಿಕಾರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ವರದಿಯಾಗಿದೆ.

ಮೈಸೂರು(ಡಿ.03): ಸಂಸದ ಪ್ರತಾಪ್ ಸಿಂಹ ಪೊಲೀಸರಿಂದ ತಪ್ಪಿಸಿಕೊಳ್ಳಲು ಬ್ಯಾರಿಕೇಡ್ ಮೇಲೆಯೇ ಕಾರು ಹತ್ತಿಸಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ನಡೆದಿದೆ.

ನಿಷೇಧದ ನಡುವೆಯೂ ಹನುಮ ಜಯಂತಿ ಮೆರವಣಿಗೆಯಲ್ಲಿ ಸಂಸದ ಪ್ರತಾಪ್ ಸಿಂಹ ಪಾಲ್ಗೊಂಡಿದ್ದರು. ಈ ವೇಳೆ ಪೊಲೀಸರು ಸಂಸದರನ್ನು ವಶಕ್ಕೆ ಪಡೆಯಲು ಮುಂದಾದಾಗ ಸಂಸದ ರ್ಯಾಸ್ ಡ್ರೈವಿಂಗ್ ಮಾಡಿಕೊಂಡು ಪೊಲೀಸರು ನಿರ್ಮಿಸಿದ್ದ ಬ್ಯಾರಿಕೇಡ್ ಮೇಲೆ ಕಾರು ಹತ್ತಿಸಿದ್ದಾರೆ.

ಸಂಸದರ ಅತಿವೇಗದ ಡ್ರೈವಿಂಗ್ ಕಂಡು ಮಹಿಳಾ ಪೊಲೀಸ್ ಅಧಿಕಾರಿ ದೂರ ಸರಿದಿದ್ದಾರೆ. ಮಹಿಳಾ ಅಧಿಕಾರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ವರದಿಯಾಗಿದೆ.