ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಂಸದೆ ರಮ್ಯಾ ಸ್ಪರ್ಧಿಸಿದರೆ ಸಂತೋಷಪಡುತ್ತೇನೆ ಎಂದು ಸಂಸದ ಪುಟ್ಟರಾಜು ವ್ಯಂಗ್ಯವಾಡಿದ್ದಾರೆ.

ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಂಸದೆ ರಮ್ಯಾ ಸ್ಪರ್ಧಿಸಿದರೆ ಸಂತೋಷಪಡುತ್ತೇನೆ ಎಂದು ಸಂಸದ ಪುಟ್ಟರಾಜು ವ್ಯಂಗ್ಯವಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಚುನಾವಣೆಯಲ್ಲಿ ಮೇಲುಕೋಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ 1800 ಮತ ಪಡೆದಿದ್ದರು. ಈ ಬಾರಿ ರಮ್ಯಾ ಸ್ಪರ್ಧಿಸಿದರೆ ಆ ಮತಗಳು ಎರಡು ಪಟ್ಟು ಹೆಚ್ಚಾಗಬಹುದು ಎಂದು ಲೇವಡಿ ಮಾಡಿದರು.

ಇದೇ ವೇಳೆ ಮಾಜಿ ಶಾಸಕ ಎಂ. ಶ್ರೀನಿವಾಸ್ ಮಾತನಾಡಿ, ಮಂಡ್ಯ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಸಿಕ್ಕರೆ ಹಾಲಿ ಶಾಸಕ ಅಂಬರೀಷ್ ಅವರನ್ನು ಸೋಲಿಸುವುದೇ ನನ್ನ ಗುರಿ. ಇದಕ್ಕೆ ಎಲ್ಲಾ ತಯಾರಿ ಮಾಡಿಕೊಂಡಿದ್ದೇನೆ. ಅಂಬರೀಷ್ ಯಾವುದೇ ಕಾರಣಕ್ಕೂ ಜೆಡಿಎಸ್‌ಗೆ ಬರುವುದಿಲ್ಲ. ಇದರ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡರೇ ಸ್ಪಷ್ಟಪಡಿಸಿದ್ದಾರೆ. ಅಂಬರೀಷ್ ಶಾಸಕರಾದ ಬಳಿಕ ನಾಲ್ಕು ವರ್ಷದಲ್ಲಿ 4 ಬಾರಿ ಮಾತ್ರ ಸದನಕ್ಕೆ ಹೋಗಿದ್ದಾರೆ. ವರ್ಷಕ್ಕೊಮ್ಮೆ ಕ್ಷೇತ್ರಕ್ಕೆ ಬರುತ್ತಾರೆ. ಅಂಬರೀಷ್‌ಗೆ ಮತ ಹಾಕಿದ್ದಕ್ಕೆ ಮಂಡ್ಯದ ಜನ ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದು ಕಿಡಿಕಾರಿದರು.