ನಮ್ಮ ಬೆಂಗಳೂರು ಫೌಂಡೇಷನ್ ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ನ ಮುಖ್ಯನ್ಯಾಯಮೂರ್ತಿಗಳ ಪೀಠ ನಗರದಲ್ಲಿ ಪ್ರತಿಷ್ಠಿತರ ಒತ್ತುವರಿ ಬಗ್ಗೆ ಸರ್ಕಾರದ ಮೃದು ಧೋರಣೆಯನ್ನು ಪ್ರಶ್ನಿಸಿದೆ.
ಬೆಂಗಳೂರಿನಲ್ಲಿ ಪ್ರತಿಷ್ಠಿತರಿಂದ ನಡೆದಿರುವ ರಾಜಕಾಲುವೆ ಒತ್ತುವರಿಗೆ ಸಂಬಂಧಿಸಿದಂತೆ ಎರಡು ವಾರದಲ್ಲಿ ವರದಿ ಸಲ್ಲಿಸುವಂತೆ ಹೈಕೋರ್ಟ್ ಇವತ್ತು ಸರ್ಕಾರಕ್ಕೆ ನಿರ್ದೇಶಿಸಿದೆ. ನಮ್ಮ ಬೆಂಗಳೂರು ಫೌಂಡೇಷನ್ ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ನ ಮುಖ್ಯನ್ಯಾಯಮೂರ್ತಿಗಳ ಪೀಠ ನಗರದಲ್ಲಿ ಪ್ರತಿಷ್ಠಿತರ ಒತ್ತುವರಿ ಬಗ್ಗೆ ಸರ್ಕಾರದ ಮೃದು ಧೋರಣೆಯನ್ನು ಪ್ರಶ್ನಿಸಿದೆ. ಅಲ್ಲದೇ ಪ್ರತಿಷ್ಠಿತರ ಒತ್ತುವರಿ ತೆರವು ಬಗ್ಗೆ ವರದಿ ಬಂದ ಬಳಿಕವೇ ಮುಂದಿನ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ಪೀಠ ತಿಳಿಸಿದೆ. ಇನ್ನು ಇದೇ ವೇಳೆ ಸರ್ಕಾರದ ದ್ವಂದ್ವ ನೀತಿ ಕುರಿತು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಖಂಡಿಸಿದ್ದಾರೆ. ಸರ್ಕಾರ ಒತ್ತುವರಿ ತೆರವು ವಿಚಾರದಲ್ಲಿ ಶ್ರೀಮಂತರಿಗೊಂದು ನ್ಯಾಯ, ಬಡವರಿಗೊಂದು ನ್ಯಾಯ ಪಾಲಿಸುವುದನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು ಎಂದು ರಾಜೀವ್ ಚಂದ್ರಶೇಖರ್ ಆಗ್ರಹಿಸಿದ್ದಾರೆ.
