ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವುದಕ್ಕೆ ಸಂಸದ ರಾಜೀವ್ ಚಂದ್ರಶೇಖರ್ ಅವರು ತೀವ್ರವಾಗಿ ಖಂಡಿಸಿದ್ದು, ಮಕ್ಕಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ.
ಬೆಂಗಳೂರು(ಸೆ.15): ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವುದಕ್ಕೆ ಸಂಸದ ರಾಜೀವ್ ಚಂದ್ರಶೇಖರ್ ಅವರು ತೀವ್ರವಾಗಿ ಖಂಡಿಸಿದ್ದು, ಮಕ್ಕಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ.
ಶಾಲೆಗಳಲ್ಲಿ ಹೆಣ್ಣು ಮಕ್ಕಳ ಮೇಲೆ ಲೈಂಗಿನ ದೌರ್ಜನ್ಯ ಪ್ರಕರಣಗಳು ನಡೆಯುವುದು ದುರಂತ. ಇಂತಹ ಘಟನೆಗಳಿಂದ ಶಾಲೆಗಳ ಮೇಲಿನ ಪೋಷಕರಿಗೆ ಮತ್ತು ಮಕ್ಕಳಿಗೆ ಇರುವ ನಂಬಿಕೆ ಕಳೆದುಕೊಳ್ಳುವ ಸಾಧ್ಯತೆ ಇದೆ. ಮುಗ್ಧ ಹೆಣ್ಣು ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿವೆ. ಆದರೂ ರಾಜ್ಯ ಸರ್ಕಾರವು ಮಕ್ಕಳ ರಕ್ಷಣೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ದುರದೃಷ್ಟಕರ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳನ್ನು ಖಂಡಿಸಿ 2014ರಲ್ಲಿ ಹೋರಾಟ ನಡೆಸಲಾಗಿತ್ತು. ಮಕ್ಕಳ ರಕ್ಷಣೆಗಾಗಿ ಆಗ್ರಹಿಸಿ ಸರ್ಕಾರಕ್ಕೆ ಹಲವು ಪತ್ರಗಳನ್ನು ಬರೆದು ಹಲವು ಸಲಹೆಗಳನ್ನು ನೀಡಲಾಗಿತ್ತು. ಆದರೆ, ಸರ್ಕಾರವು ಯಾವುದನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಮಕ್ಕಳ ರಕ್ಷಣೆ ಕುರಿತಂತೆ ನೀಡಿರುವ ಸಲಹೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಸಂಪೂರ್ಣವಾಗಿ ವಿಲವಾಗಿದೆ. ಶಾಲೆಗಳಲ್ಲಿ ಮಕ್ಕಳ ರಕ್ಷಣೆ ಕುರಿತು ನೀಡಿರುವ ಸಲಹೆಗಳನ್ನು ಅನುಷ್ಠಾನಗೊಳಿಸಿದ್ದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಕ್ಕಳ ರಕ್ಷಣೆಗೆ ಸೂಕ್ತ ಕ್ರಮ ಜರುಗಿಸಬೇಕಾದ ರಾಜ್ಯ ಸರ್ಕಾರವು ನಿರ್ಲಕ್ಷ್ಯತನ ವಹಿಸಿದೆ. ಇತ್ತೀಚೆಗೆ ಖಾಸಗಿ ಶಾಲೆಯೊಂದರಲ್ಲಿ ನಡೆದ ನಾಲ್ಕು ವರ್ಷದ ಹೆಣ್ಣು ಮಗುವಿನ ಮೇಲಿನ ಲೈಂಗಿಕ ದೌರ್ಜನ್ಯ ಇದಕ್ಕೆ ನಿರ್ದಶನವಾಗಿದೆ. ಈಗಲಾದರೂ ಎಚ್ಚೆತ್ತು ಸರ್ಕಾರ ಮಕ್ಕಳ ರಕ್ಷಣೆಗೆ ಸೂಕ್ತ ರಕ್ಷಣೆ ಒದಗಿಸುವಲ್ಲಿ ಕ್ರಮ ಕೈಗೊಳ್ಳಬೇಕು ಎಂದು ರಾಜೀವ್ ಆಗ್ರಹಿಸಿದ್ದಾರೆ.
