ವಿವಾದಾತ್ಮಕ ಹೇಳಿಕೆಗೆ ಸಂಸದ ನಳೀನ್ ಕುಮಾರ್ ಕಟೀಲ್ ಕ್ಷಮೆ ಕೋರಿದ್ದಾರೆ
ಮಂಗಳೂರು(ಜ.1): ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚುತ್ತೇನೆ ಎಂಬ ವಿವಾದಾತ್ಮಕ ಹೇಳಿಕೆಗೆ ಸಂಸದ ನಳೀನ್ ಕುಮಾರ್ ಕಟೀಲ್ ಕ್ಷಮೆ ಕೋರಿದ್ದಾರೆ. ಸುವರ್ಣ ನ್ಯೂಸ್'ನೊಂದಿಗೆ ಮಾತನಾಡಿದ ಅವರು' ಕಾರ್ತಿಕ್ ರಾಜ್ ಕೊಲೆ ಆರೋಪಿಗಳ ಬಂಧನ ವಿಳಂಬ ಖಂಡಿಸಿ ಕೊಣಾಜೆ ಪೊಲೀಸ್ ಸ್ಟೇಷನ್ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡುವಾಗ ಮಾತಿನ ಬರದಲ್ಲಿ ಈ ರೀತಿ ಹೇಳಿದ್ದೇನೆ ಹೊರತು. ಉದ್ದೇಶಪೂರ್ವಕವಾಗಿ ಹೇಳಿಲ್ಲ. ಜನರು ಹಚ್ಚುತ್ತಾರೆ ಎನ್ನುವ ಬದಲು ಈ ರೀತಿ ಹೇಳಿದ್ದೇನೆ. ತಪ್ಪಾಗಿದ್ದಾರೆ ಕ್ಷಮೆ ಕೋರುತ್ತೇನೆ' ಎಂದು ತಿಳಿಸಿದ್ದಾರೆ.
ಪ್ರತಿಭಟನೆಯ ಸಂದರ್ಭದಲ್ಲಿ 'ಎರಡು ತಿಂಗಳ ಹಿಂದೆ ನಡೆದ ಬಿಜೆಪಿ ಕಾರ್ಯಕರ್ತ ಕಾರ್ತಿಕ್ ರಾಜ್ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸದಿದ್ದರೆ ಇಡೀ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚುವುದಾಗಿ ಹೇಳಿದ್ದರು.
