ಕರ್ನಾಟಕ ಮತ್ತು ಕೇರಳದಲ್ಲಿ ನಡೆದಿರುವ ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರ ಎಲ್ಲ ಕೊಲೆಗಳ ಬಗ್ಗೆ ರಾಜ್ಯ ಸರ್ಕಾರಗಳಿಂದ ವರದಿ ತರಿಸಿಕೊಂಡು ಅಪರಾಧಿಗಳನ್ನು ಶೀಘ್ರವೇ ಬಂಧಿಸುವಂತೆ ರಾಜ್ಯ ಸರ್ಕಾರಗಳ ಮೇಲೆ ಒತ್ತಡ ತರಬೇಕು ಎಂದು ಬಿಜೆಪಿ ಸಂಸದರು, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ.

ನವದೆಹಲಿ (ಆ.01): ಕರ್ನಾಟಕ ಮತ್ತು ಕೇರಳದಲ್ಲಿ ನಡೆದಿರುವ ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರ ಎಲ್ಲ ಕೊಲೆಗಳ ಬಗ್ಗೆ ರಾಜ್ಯ ಸರ್ಕಾರಗಳಿಂದ ವರದಿ ತರಿಸಿಕೊಂಡು ಅಪರಾಧಿಗಳನ್ನು ಶೀಘ್ರವೇ ಬಂಧಿಸುವಂತೆ ರಾಜ್ಯ ಸರ್ಕಾರಗಳ ಮೇಲೆ ಒತ್ತಡ ತರಬೇಕು ಎಂದು ಬಿಜೆಪಿ ಸಂಸದರು, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ನೇತೃತ್ವದಲ್ಲಿ ರಾಜ್ಯದ ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ, ಕೇರಳದ ರಾಜ್ಯ ಸಭಾ ಸದಸ್ಯ ಸುರೇಶ್ ಗೋಪಿ, ರಿಚ್ಚರ್ಡ್‌ಹೇ ಅವರನ್ನು ಒಳಗೊಂಡಿದ್ದ ನಿಯೋಗ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಶರತ್ ಮಡಿವಾಳ ಸೇರಿದಂತೆ ಅನೇಕ ಹಿಂದೂಪರ ಕಾರ್ಯಕರ್ತರ ಹತ್ಯೆಯ ಹಿನ್ನೆಲೆಯಲ್ಲಿ ಪಿಎಫ್‌ಐ, ಕೆಎಫ್‌ಡಿ ಹಾಗೂ ಎನ್‌ಡಿಎಫ್ ಸಂಘಟನೆಗಳನ್ನು ನಿಷೇಧಿಸಬೇಕು ಮತ್ತು ಹಿಂದೂ ಕಾರ್ಯಕರ್ತರ ಹತ್ಯೆಯ ಬಗ್ಗೆ ಎನ್‌ಐಎ ತನಿಖೆ ನಡೆಯಬೇಕು ಎಂದು ಕೇಂದ್ರ ಗೃಹ ಸಚಿವರಲ್ಲಿ ನಿಯೋಗ ಕೋರಿದೆ.