ಕೋಲ್ಕತ್ತಾ, [ಫೆ.10]: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಶನಿವಾರ ನಡೆದ ಟಿಎಂಸಿಯ ಕೃಷ್ಣಗಂಜ್​ ಶಾಸಕ  ಸತ್ಯಜಿತ್​ ಬಿಸ್ವಾಸ್​ ಕೊಲೆ ಪ್ರಕರಣದಲ್ಲಿ ಬಿಜೆಪಿ ನಾಯಕ ಮುಕುಲ್​ ರಾಯ್​ ಸೇರಿ ನಾಲ್ವರ ವಿರುದ್ಧ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ. 

ಈ ಪೈಕಿ ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ಇವರಿಬ್ಬರೂ ಬಿಜೆಪಿ ಕಾರ್ಯಕರ್ತರು ಎನ್ನಲಾಗಿದೆ. ತಮ್ಮ ವಿಧಾನಸಭಾ ಕ್ಷೇತ್ರ ಫೂಲ್​ಪುರ್​ನಲ್ಲಿ ಶನಿವಾರ ಸಂಜೆ ಆಯೋಜನೆಗೊಂಡಿದ್ದ ಸರಸ್ವತಿ ಪೂಜೆ ಕಾರ್ಯಕ್ರಮ ಉದ್ಘಾಟಿಸಲು ಸತ್ಯಜಿತ್​ ಬಿಸ್ವಾಸ್​ ಆಗಮಿಸಿದ್ದರು. 

ರಾಜಕೀಯ ಅಲ್ಲೋಲಕಲ್ಲೋಲ: ಗುಂಡಿಕ್ಕಿ ಶಾಸಕನ ಮರ್ಡರ್!

ಆಗ ಅಪರಿಚಿತರು ತುಂಬಾ ಹತ್ತಿರದಿಂದ ಅವರ ಮೇಲೆ ಗುಂಡಿನ ದಾಳಿ ಮಾಡಿ ಹತ್ಯೆ ಮಾಡಿದ್ದರು. ಪ್ರಕರಣದಲ್ಲಿ ಇದುವರೆಗೆ ಇಬ್ಬರನ್ನು ಬಂಧಿಸಲಾಗಿದೆ. 

ಇನ್ನೂ ಮೂವರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗುತ್ತಿದೆ.  ಶಾಸಕನ ಹತ್ಯೆಯಲ್ಲಿ ಬಳಸಲಾಗಿದ್ದ ನಾಡಪಿಸ್ತೂಲ್​ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಫೋಟೋ: ಹತ್ಯೆಯಾದ ಶಾಸಕ ಸತ್ಯಜಿತ್​ ಬಿಸ್ವಾಸ್​.