ನನ್ನನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಿದ್ದು ಸಮಾಜವಾದಿ ಪಕ್ಷದ ಅಧ್ಯಕ್ಷರಾದ ನನ್ನ ತಂದೆ ಮುಲಾಯಂ ಸಿಂಗ್ ಯಾದವ್. ಒಂದು ವೇಳೆ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿ ಎಂದು ಹೇಳಿದರೆ ಖಂಡಿತ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಅಖಿಲೇಶ್ ತಿಳಿಸಿದ್ದಾರೆ.
ಲಖನೌ(ಅ.26): ಒಂದು ವೇಳೆ ನನ್ನನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಸಿದರೂ ನಾನು ಸಮಾಜವಾದಿ ಪಕ್ಷವನ್ನು ತೊರೆಯಲಾರೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.
ನನ್ನನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಿದ್ದು ಸಮಾಜವಾದಿ ಪಕ್ಷದ ಅಧ್ಯಕ್ಷರಾದ ನನ್ನ ತಂದೆ ಮುಲಾಯಂ ಸಿಂಗ್ ಯಾದವ್. ಒಂದು ವೇಳೆ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿ ಎಂದು ಹೇಳಿದರೆ ಖಂಡಿತ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಅಖಿಲೇಶ್ ತಿಳಿಸಿದ್ದಾರೆ.
ಒಂದು ವೇಳೆ ಪಕ್ಷ ತೊರೆದು ಬೇರೆ ಪಕ್ಷವನ್ನು ಸ್ಥಾಪಿಸುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅಖಿಲೇಶ್, ಒಂದು ವೇಳೆ ನಾನು ಪದಚ್ಯುತಿಗೊಂಡರೂ, ನಮ್ಮ ಪಕ್ಷಕ್ಕಾಗಿ ಪ್ರಚಾರ ನಡೆಸುತ್ತೇಯೇ ಹೊರತು ಬೇರೆ ಪಕ್ಷವನ್ನು ಸ್ಥಾಪಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
2012 ರ ಚುನಾವಣೆಯಲ್ಲಿ ನನ್ನ ಹೆಸರನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಿದ್ದು ನೆನಪಿರಲಿ ಎಂದು ಮುಲಾಯಂ ಸಿಂಗ್ ಯಾದವ್ ಹೇಳಿದ ಮಾತಿಗೆ ಅಖಲೇಶ್ ಈ ಮೇಲಿನಂತೆ ಉತ್ತರಿಸಿದ್ದಾರೆ.