ಲಖನೌ: ಅತ್ತ ಮುಲಾಯಂಸಿಂಗ್‌ ಯಾದವ್‌, ಪ್ರಧಾನಿ ಮೋದಿಯನ್ನು ಹೊಗಳಿದರೆ, ಇತ್ತ ಅವರ ಕಿರಿಯ ಸೊಸೆ ಅಪರ್ಣಾ ಯಾದವ್‌, ಕಾಂಗ್ರೆಸ್‌ನ ನೂತನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾರನ್ನು ಹೊಗಳಿದ್ದಾರೆ. 

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಪರ್ಣಾ, ಸಮಾಜವಾದಿ ಪಕ್ಷವು ಬಿಎಸ್‌ಪಿ ಬದಲು ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಳ್ಳಬೇಕಿತ್ತು. ಹಾಗಾಗಿದ್ದರೆ, ಚುನಾವಣೆಯಲ್ಲಿ ಹೆಚ್ಚಿನ ಗೆಲುವು ಸಿಗುತ್ತಿತ್ತು ಎಂದು ಹೇಳಿದ್ದಾರೆ. 

ಇದೇ ವೇಳೆ ದೆಹಲಿಯಲ್ಲಿ ಶೀಲಾ ದೀಕ್ಷಿತ್‌ ಬದಲು ಪ್ರಿಯಾಂಕಾರನ್ನು ಸಿಎಂ ಅಭ್ಯರ್ಥಿಯಾಗಿ ಘೋಷಿಸಬೇಕಿತ್ತು ಎಂದೂ ಅಪರ್ಣಾ ಅಭಿಪ್ರಾಯಪಟ್ಟಿದ್ದಾರೆ.