ಮುಂಬೈನಲ್ಲಿ 115 ವರ್ಷದ ಹಳೆಯ ಐದು ಅಂತಸ್ತಿನ ಕಟ್ಟಡ ಕುಸಿತದಿಂದ ಮೃತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. 14 ಮಂದಿ ಗಾಯಗೊಂಡಿದ್ದು, ಕಟ್ಟಡದ ಅವಶೇಷಗಳಲ್ಲಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮುಂಬೈನಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ಇಲ್ಲಿನ ಡೋಂಗ್ರಿ ಪ್ರದೇಶದ ಭೇಂಡಿ ಬಜಾರ್‌ನಲ್ಲಿನ 5 ಅಂತಸ್ತಿನ ಕಟ್ಟಡ ನಿನ್ನೆ ಬೆಳಗ್ಗೆ ಕುಸಿದಿತ್ತು.

ಮುಂಬೈ(ಸೆ.01): ಮುಂಬೈನಲ್ಲಿ 115 ವರ್ಷದ ಹಳೆಯ ಐದು ಅಂತಸ್ತಿನ ಕಟ್ಟಡ ಕುಸಿತದಿಂದ ಮೃತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. 14 ಮಂದಿ ಗಾಯಗೊಂಡಿದ್ದು, ಕಟ್ಟಡದ ಅವಶೇಷಗಳಲ್ಲಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮುಂಬೈನಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ಇಲ್ಲಿನ ಡೋಂಗ್ರಿ ಪ್ರದೇಶದ ಭೇಂಡಿ ಬಜಾರ್‌ನಲ್ಲಿನ 5 ಅಂತಸ್ತಿನ ಕಟ್ಟಡ ನಿನ್ನೆ ಬೆಳಗ್ಗೆ ಕುಸಿದಿತ್ತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆರಂಭದಲ್ಲಿ 10 ಜನ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿತ್ತು. ನಂತರ 21 ಜನರು ಸಾವನ್ನಪ್ಪಿದ್ದಾಗಿ ತಿಳಿದು ಬಂದಿದ್ದು, ಇದೀಗ ಈ ಸಾವಿನ ಸಂಖ್ಯೆ 33ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಮೃತರಲ್ಲಿ 9 ಮಹಿಳೆಯರು ಹಾಗೂ 24 ಜನ ಪುರುಷರು ಸೇರಿದ್ದಾರೆ. ಕಟ್ಟಡದ ಅವಶೇಷಗಳಲ್ಲಿ ಇನ್ನೂ ಹಲವರು ಸಿಲುಕಿದ್ದಾರೆ.

ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರಿದಿದೆ. ಈ ಘಟನೆ ಬಗ್ಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌‌ ತನಿಖೆಗೆ ಆದೇಶಿಸಿದ್ದು, ಮೃತ ಕುಟುಂಬಗಳಿಗೆ ತಲಾ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.