ಬೆಳಗಾವಿ :  ವರದಕ್ಷಿಣೆಗಾಗಿ ಗರ್ಭಿಣಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ತಪಸ್ಸಿ ಗ್ರಾಮದಲ್ಲಿ ನಡೆದಿದೆ. 

ಪತಿ ಸಿದ್ದಪ್ಪ ಹಾಗೂ ಅತ್ತೆ, ಮಾವ ಸೇರಿ  ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾರೆ.  ಈ ವೇಳೆ ಗರ್ಭಿಣಿ ಅನುಸೂಯಾ (27) ಸ್ಥಿತಿ ಗಂಭೀರವಾಗಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  

ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದಾರೆ.  ಅನುಸೂಯಾ ತಂದೆಯ ಜಮೀನು ವರ್ಗಾವಣೆ ಮಾಡುವಂತೆ ಪಟ್ಟು ಹಿಡಿದಿದ್ದು,  ಪತಿಯ ಮಾತನ್ನು ಕೇಳದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸೇರಿ ಹತ್ಯೆಗೆ ಯತ್ನ ಮಾಡಿದ್ದಾರೆ. 

ಸದ್ಯ ಈ ಸಂಬಂಧ ಕುಲಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತಿ ಸಿದ್ದಪ್ಪ ಸೇರಿ ಕುಟುಂಬಸ್ಥರು ಪರಾರಿಯಾಗಿದ್ದಾರೆ. ಆರೋಪಿಗಳಿಗಾಗಿ ಸದ್ಯ ಪೊಲೀಸರು ಶೋಧ ನಡೆಸುತ್ತಿದ್ದಾರೆ.