ಬೆಂಗಳೂರು(ಸೆ.16): ಪರ್ತಕರ್ತರು ಹಾಗೂ ಹಿಂದೂ ಸಂಘಟನೆಯ ಮುಖಂಡರ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಎಲ್ಲಾ ಆರೋಪಿಗಳಿಗೆ 5 ವರ್ಷ ಜೈಲು ಶಿಕ್ಷೆ ನೀಡಿ ಎನ್‌ಐಎ ಕೋರ್ಟ್ ತೀರ್ಪು ನೀಡಿದೆ. 

ಕರ್ನಾಟಕ, ಗೋವಾ, ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯದಲ್ಲಿ ಹಿಂದೂ ಪರ ಸಂಘಟನೆಯ ಮುಂಖಡರ ಹತ್ಯೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ 14 ಆರೋಪಿಗಳನ್ನು ಬಂಧಿಸಲಾಗಿತ್ತು. 14 ಆರೋಪಿಗಳ ಪೈಕಿ 13 ಆರೋಪಿಗಳ ವಿರುದ್ಧ ಆರೋಪ ಸಾಬೀತಾಗಿತ್ತು. 

ಇದೀಗ ಸಿವಿಲ್ ಕೋರ್ಟ್ ಆವರಣದಲ್ಲಿರುವ ಎನ್‌ಐಎ ಕೋರ್ಟ್ ಎಲ್ಲಾ 13 ಆರೋಪಿಗಳಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 7 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಝಾಕೀರ್ ಎನ್ನುವ ಆರೋಪಿ ತಲೆ ಮರೆಸಿಕೊಂಡಿದ್ದು, ಈ ಎಲ್ಲಾ ಆರೋಪಿಗಳು ಸಂಸದ ಪ್ರತಾಪ್ ಸಿಂಹ, ವಿಜಯ್ ಸಂಕೇಶ್ವರ್ ಹತ್ಯೆಗೆ ಸಂಚು ರೂಪಿಸಿದ್ದರು.