ಹುಬ್ಬಳ್ಳಿ ಮೂಲದ ವಿಜಯಲಕ್ಷ್ಮಿ ಮತ್ತು ಮುಸ್ತಾಕ್ ಇವರಿಬ್ಬರು ಕಳೆದ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇತ್ತೀಚೆಗಷ್ಟೇ ಮದುವೆ ಕೂಡ ಆಗಿದ್ದರು

ಚಿಕ್ಕಮಗಳೂರು(ಸೆ.04): ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಚಿಕ್ಕಮಗಳೂರಿನಲ್ಲಿ ಮುಸ್ಲಿಂ ಧರ್ಮದ ಯುವಕ ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದಾನೆ.

ಬಿಬಿಬಿ ನಗರದ ಓಂಕಾರೇಶ್ವರ ಗಣಪತಿ ದೇವಸ್ಥಾನದಲ್ಲಿ ಹಿಂದೂ ಮಹಾಸಭಾ ಗಣಪತಿಯ ಪೂಜಾ ಕಾರ್ಯಕ್ರಮದಲ್ಲಿ ಮತಾಂತರ ಕಾರ್ಯಕ್ರಮ ನಡೆದಿದೆ. ಹುಬ್ಬಳ್ಳಿ ಮೂಲದ ವಿಜಯಲಕ್ಷ್ಮಿ ಮತ್ತು ಮುಸ್ತಾಕ್ ಇವರಿಬ್ಬರು ಕಳೆದ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇತ್ತೀಚೆಗಷ್ಟೇ ಮದುವೆ ಕೂಡ ಆಗಿದ್ದರು .ಹಿಂದೂ ಧರ್ಮದ ಬಗ್ಗೆ ಅಪಾರ ನಂಬಿಕೆ ಇರುವ ಮುಸ್ತಾಕ್ ಇಂದು ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದಾನೆ. ಮುಸ್ತಾಕ್'ನಿಂದ ಪ್ರತಾಪ್ ಎಂದು ಮರುನಾಮಕರಣ ಗೊಂಡಿದ್ದಾನೆ. ಆ ನವದಂಪತಿಗಳಿಗೆ ಮುಂದೆಯೂ ಯಾವುದೇ ತೊಂದರೆ ಆಗದಂತೆ ಸಮುದಾಯ ನೋಡಿಕೊಳ್ಳುತ್ತೆಂದು ಹಿಂದು ಸಂಘಟಕರು ಆಶ್ವಾಸನೆ ಕೊಟ್ಟಿದ್ದಾರೆ.